ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಪ್ರಭು ಚವಾಣ್

ಬೀದರ್:ಮಾ.11: ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಇದೇ ಮಾರ್ಚ್ 15 ಮತ್ತು 16ರಂದು ಪೆÇ್ರ.ಸಿದ್ರಾಮಪ್ಪ ಮಾಸಿಮಾಡೆ ಅಧ್ಯಕ್ಷತೆಯಲ್ಲಿ ಜರುಗಲಿರುವ ಬೀದರ್ ಜಿಲ್ಲಾ 20ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರನ್ನಾಗಿ ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ತಿಳಿಸಿದ್ದಾರೆ.

ನಗರದ ಬಸವ ಕೇಂದ್ರದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಕಾರ್ಯಾಧ್ಯಕ್ಷರಾಗಿ ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್, ಕೋಶಾಧ್ಯಕ್ಷರಾಗಿ ರೇವಣಸಿದ್ದಪ್ಪ ಜಲಾದೆ ಅವರನ್ನು ಆಯ್ಕೆ ಮಾಡಲಾಗಿದ್ದು, ಜಿಲ್ಲೆಯ ಎಲ್ಲ ಶಾಸಕರು, ವಿಧಾನಪರಿಷತ್ತಿನ ಸದಸ್ಯರನ್ನು ಸ್ವಾಗತ ಸಮಿತಿಯ ಪೆÇೀಷಕರನ್ನಾಗಿ ಆಯ್ಕೆ ಮಾಡಲಾಗಿದೆ.

ಇದೇ ಸಂದರ್ಭದಲ್ಲಿ ವಿವಿಧ ಉಪಸಮಿತಿಗಳನ್ನೂ ಸಹ ರಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.