ಸಿಂಗಾಪುರದಲ್ಲಿ ಕೋವಿಡ್ ಸೋಂಕು ಹಠಾತ್ ಏರಿಕೆ

(ಸಂಜೆವಾಣಿ ಪ್ರತಿನಿಧಿಯಿಂದ)
ಸಿಂಗಾಪುರ,ಮೇ೨೧:ಸಿಂಗಾಪುರದಲ್ಲಿ ಹೊಸ ಕೋವಿಡ್ ಅಲೆ ಕಾಣಿಸಿಕೊಂಡಿದ್ದು, ಆತಂಕಕ್ಕೇಡೆ ಮಾಡಿಕೊಟ್ಟಿದೆ. ಒಂದು ವಾರದ ಅವಧಿಯಲ್ಲಿ ೧೩.೭೦೦ ರಿಂದ ೨೫,೯೦೦ ಪ್ರಕರಣಗಳು ದ್ವಿಗುಣಗೊಂಡಿವೆ. ಇದರಿಂದಾಗಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ದೈನಂದಿನ ಕೋವಿಡ್ ಪ್ರಕರಣಗಳು ೧೮೧ ರಿಂದ ೨೫೦ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಸಿಂಗಾಪುರ ಆರೋಗ್ಯ ಸಚಿವ ಓಂಗ್ ಎ ಕುಂಗ್ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಿದ್ದಾರೆ.
ಪ್ರಸ್ತುತ ಯಾವುದೇ ರೀತಿಯ ಸಾಮಾಜಿಕ ನಿರ್ಬಂಧ ಹೇರುವ ಕುರಿತು ಚಿಂತನೆ ನಡೆಸಿಲ್ಲ. ಕೋವಿಡ್-೧೯ನ್ನು ಸ್ಥಳೀಯ ಕಾಯಿಲೆ ಎಂದು ಪರಿಗಣಿಸಲಾಗಿದೆ. ಕೋವಿಡ್ ಹೊಸ ಅಲೆಯ ಪತವನ್ನು ಸರ್ಕಾರ ಅತ್ಯಂತ ನಿಕಟವಾಗಿ ಗಮನಿಸುತ್ತಿದೆ ಎಂದು ಅವರು ಹೇಳಿದರು.
ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಾiರ್ಥ್ಯವನ್ನು ಸಂರಕ್ಷಿಸಲು ಸಾರ್ವಜನಿಕ ಆಸ್ಪತ್ರೆಗಳಿಗೆ ತುರ್ತು ಚಿಕಿತ್ಸೆಗಳಿಗೆ ಹಾಗೂ ರೋಗಿಗಳ ಆರೈಕೆ
ಮಾಡಲು ಸೌಲಭ್ಯ ಕಲ್ಪಿಸಲು ಸೂಚನೆ ನೀಡಲಾಗಿದೆ.
ಸಿಂಗಾಪುರದಿಂದ ಬೆಂಗಳೂರು ಮತ್ತು ಮುಂಬೈಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಮಾನಗಳು ಆಗಮಿಸುತ್ತಿದ್ದು, ಈ ಎರಡೂ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಮಹಾರಾಷ್ಟ್ರದಲ್ಲಿ ಕೋವಿಡ್ ಓಮಿಕ್ರಾನ್ ರೂಪಾಂತರಿ ಸೋಂಕು ೯೧ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಸಿಂಗಾಪುರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಗ್ಯ ಇಲಾಖೆಯು ಕಟ್ಟೆಚ್ಚರ ವಹಿಸಲು ಮುಂದಾಗಿದ್ದು, ಸಿಂಗಾಪುರದಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾವಹಿಸಿದೆ.