ಸಿಎಂಸಿ ಅಧ್ಯಕ್ಷ ಗಾದಿ ಬಿಜೆಪಿಗೆ-ಫಲಿಸಿದ ತಂತ್ರ

ಚಿಕ್ಕಬಳ್ಳಾಪುರ,ಅ.೩೧:ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಗಾದಿ ಆಶ್ಚರ್ಯಕರ ರೀತಿಯಲ್ಲಿ ಬಿಜೆಪಿ ಪಾಲಾಗಿದ್ದು, ಆರೋಗ್ಯ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ತಂತ್ರ ಫಲಿಸಿದೆ.
ನಗರಸಭೆಯ ಅಧ್ಯಕ್ಷ, ಉಪಾ ಧ್ಯಕ್ಷ ಸ್ಥಾನಗಳ ಚುನಾವಣೆ ತೀವ್ರ ಕುತೂಹಲ ಸೃಷ್ಟಿಸಿತ್ತು. ಪ್ರತಿ ವರ್ಷ ದಂತೆ ಈ ಬಾರಿಯೂ ಕಾಂ ಗ್ರೆಸ್ ಆಡಳಿತವೇ ಮುಂದುವರಿ ಯಲಿದೆ ಎಂದು ಮೊದಲಿಗೆ ಅಂದಾಜಿಸಲಾ ಗಿತ್ತು. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ಅವರ ತಂತ್ರದಿಂದಾಗಿ ನಿರೀಕ್ಷೆ ಉಲ್ಟಾ ಆಗಿ ನಗರಸಭೆ ಬಿಜೆಪಿಗೆ ಒಲಿದಿದ್ದು, ಬಿಜೆಪಿ ಬೆಂಬಲಿತ ಪಕ್ಷೇತರ ಸದಸ್ಯ ಆನಂದರೆಡ್ಡಿ ೨೨ ಮತಗಳನ್ನು ಪಡೆದು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಯಾಗಿದ್ದಾರೆ. ಕಾಂಗ್ರೆಸ್ ನ ಅಂಬಿಕಾ ಕೇವಲ ೯ ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಸದಸ್ಯೆ ವೀಣಾ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ.
ಒಟ್ಟು ೩೧ ಸದಸ್ಯರಿರುವ ನಗರಸಭೆಯಲ್ಲಿ, ಕಾಂಗ್ರೆಸ್ ಪಕ್ಷ ೧೬, ಬಿಜೆಪಿ ೯, ಜೆಡಿಎಸ್ ೨ ಹಾಗೂ ೪ ಪಕ್ಷೇತರ ಸದಸ್ಯರಿದ್ದಾರೆ. ಸಂಖ್ಯಾಬಲವನ್ನು ನೋಡಿದರೆ ಕಾಂಗ್ರೆಸ್‌ಗೆ ಸುಲಭವಾಗಿ ಅದಿ ಕಾರದ ಚುಕ್ಕಾಣಿ ದೊರೆಯ ಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಬಿಜೆಪಿ ಗೆಲುವು ಸಾಧಿಸುವಂತೆ ಸಚಿವ ಡಾ.ಕೆ.ಸುಧಾಕರ್ ಮ್ಯಾಜಿಕ್ ಮಾಡಿದ್ದಾರೆ.
ಸಾಮಾನ್ಯ ವರ್ಗಕ್ಕೆ ಮೀಸ ಲಾದ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಜೋರಾಗಿತ್ತು. ಈ ಸಂದರ್ಭದಲ್ಲಿ ಸಚಿವ ಡಾ.ಕೆ.ಸುಧಾಕರ್ ಪಕ್ಷೇತರ ಸದಸ್ಯ ಆನಂದರೆಡ್ಡಿ ಅವರನ್ನು ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿ ಬಿಜೆಪಿಯಿಂದ ಬೆಂಬಲ ಕೊಡಿಸುವ ಕಾರ್ಯತಂತ್ರವನ್ನು ಹೆಣೆದರು. ಇದರ ಪರಿಣಾಮ, ಕಾಂಗ್ರೆಸ್ ಅಧಿಕಾರ ಕಳೆದುಕೊಂಡು ಬಿಜೆಪಿ ಮೇಲುಗೈ ಸಾಧಿಸಿದೆ.
ನಂತರ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್, ಇತಿಹಾಸದಲ್ಲಿ ಮೊದಲ ಬಾರಿ ಬಿಜೆಪಿ ನಗರ ಸಭೆಯ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಸಂಸದರಾದ ಶ್ರೀ ಬಿ.ಎನ್. ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯ ಶ್ರೀ ವೈ.ಎ. ನಾರಾಯಣಸ್ವಾಮಿ, ಅವರ ನೇತೃತ್ವದಲ್ಲಿ ನಗರಸಭೆಯ ಸದಸ್ಯರು ಬೇಷರತ್ ಬೆಂಬಲ ನೀಡಿರುವು ದರಿಂದ ಆಯ್ಕೆ ಸಾಧ್ಯವಾಗಿದೆ. ನನಗೆ ಅಭಿವೃದ್ಧಿ ಮಾತ್ರ ಮುಖ್ಯ. ಈ ಚುನಾವಣೆ ಕೂಡ ಅಭಿ ವೃದ್ಧಿಗಾಗಿ ಮಾತ್ರ ಆಗಿದೆ” ಎಂದು ತಿಳಿಸಿದರು.
ಚಿಕ್ಕಬಳ್ಳಾಪುರವನ್ನು ಸುಂದರ, ಸುರಕ್ಷಿತ ನಗರವಾಗಿ ರೂಪುಗೊಳಿಸುವುದೇ ನಮ್ಮ ಉದ್ದೇಶ. ಅಧ್ಯಕ್ಷರಾಗಿ ಆಯ್ಕೆಯಾದ ಆನಂದರೆಡ್ಡಿ ಬಹಳ ಅನುಭವಿಗಳಾ ಗಿದ್ದಾರೆ. ಅವರಿಗೆ ಬದ್ಧತೆ, ದಕ್ಷತೆ ಇದೆ. ಹೊಸ ತಂಡ ಹುರುಪಿನಿಂದ, ಜನಪರವಾಗಿ ಕೆಲಸ ಮಾಡಲಿದೆ. ನಾನು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.