ಸಿಎಂಸ್ಟಾಲಿನ್ ಗೆ ಕೋವಿಡ್ ದೃಢ

ಚೆನ್ನೈ,ಜು೧೪: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಗೆ ಕೊರೊನಾ ಪಾಸಿಟಿವ್ ಆಗಿದೆ. ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಂ.ಕೆ.ಸ್ಟಾಲಿನ್ ಅವರನ್ನು ಚೆನ್ನೈನ ಅಲ್ವಾರ್ಪೇಟ್ನ ಕಾವೇರಿ ಆಸ್ಪತ್ರೆಗೆ ಕೋವಿಡ್ ರೋಗಲಕ್ಷಣಗಳ ಕಾಣಿಸಿಕೊಂಡಿದ್ದ ಹಿನ್ನೆಲೆ ಟೆಸ್ಟ್ ಮಾಡಲಾಗಿತ್ತು. ಈ ವೇಳೆ ಕೊರೊನಾ ಪಾಸಿಟಿವ್ ದೃಢ ಪಟ್ಟಿದೆ. ಹೀಗಾಗಿ ಅವರನ್ನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಮುಖ್ಯಮಂತ್ರಿಗಳು ಶೀಘ್ರದಲ್ಲೇ ಗುಣಮುಖರಾಗಿಲಿ ಎಂದು ರಾಜ್ಯಪಾಲ ಆರ್.ಎನ್.ರವಿ ಹಾರೈಸಿದ್ದಾರೆ. ಮಾಜಿ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಟ್ವೀಟ್ ಮಾಡಿ, ಸ್ಟಾಲಿನ್ ಶೀಘ್ರ ಗುಣಮುಖರಾಗಲಿ ಮತ್ತು ಜನರಿಗಾಗಿ ತಮ್ಮ ಕೆಲಸವನ್ನು ಮುಂದುವರಿಸಲು ಸರ್ವಶಕ್ತನನ್ನು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.