ಸಿಎಂ ಆಯ್ಕೆಗೆ ಟ್ಬಿಸ್ಟ್ : ಇಬ್ಬರ ಜಗಳ ಮೂರನೆಯವರಿಗೆ ಲಾಭ ಸಾದ್ಯತೆ

ನವದೆಹಲಿ, ಮೇ.೧೭- ಸಿದ್ದರಾಮಯ್ಯ ನೂತನ ಮುಖ್ಯಮಂತ್ರಿ ಎಂದು ರಾಜ್ಯಾದ್ಯಂತ ಸಂಭ್ರಮಿಸುತ್ತಿರುವ ನಡುವೆ ಮುಖ್ಯಮಂತ್ರಿ ಆಯ್ಕೆ ಮತ್ತೆ ಜಟಿಲವಾಗಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಮಾಡಲು ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಅವಕಾಶ ನೀಡದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಕಂಗಟ್ಟಾಗಿದ್ದು ಇಬ್ಬರ ಜಗಳ ಮೂರನೆಯವರಿಗೆ ಲಾಭವಾಗುವ ಸಾದ್ಯತೆಗಳಿವೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿ ಕಾರ್ಜುನ ಖರ್ಗೆ ಅವರನ್ನು ಮುಂತ್ರಿಯಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಡ ಹೇರಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಆಯ್ಕೆ ಕಾಂಗ್ರೆಸ್ ಹೈಕಮಾಂಡ್ ಗೆ ಜಟಿಲವಾಗಿದೆ.

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮಾತಿಗೆ ಮನ್ನಣೆ ನೀಡದಿರುವುದು ಸಿಎಂ ಆಯ್ಕೆ ಜಠಿಲವಾಗಿದೆ. ಇಬ್ಬರ ಜಗಳ ಮೂರನೇಯವರಿಗೆ ಲಾಭವಾಗುವ ಸಾದ್ಯತೆಗಳಿವೆ.

ಕಾಂಗ್ರೆಸ್ ಗೂ ಹೆಮ್ಮೆ

೫೦ ವರ್ಷಗಳ ನಿಮ್ಮ ರಾಜಕೀಯ ಜೀವನದಲ್ಲಿ ಮುಖ್ಯಮಂತ್ರಿ ಮಾಡಿದ ಹೆಮ್ಮೆ ಕಾಂಗ್ರೆಸ್ ಪಕ್ಷ ಮತ್ತು ಕೆಪಿಸಿಸಿ ಅಧ್ಯಕ್ಷನಾಗಿ ನನಗೂ ಹೆಮ್ಮೆ. ನೀವೇ ಮುಖ್ಯಮಂತ್ರಿಯಾಗಿ ಎಂದು ಶಿವಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಒತ್ತಡ ಹೇರಿದ್ದಾರೆ.

ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ನಿಮಗೂ ಇದೆ ಎಂದು ಡಿಕೆ ಶಿವಕುಮಾರ್ ಒತ್ತಡ ಹೇರಿದ್ದಾರೆ. ಹೀಗಾಗಿ ಹೈಕಮಾಂಡ್ ಗೊಂದಲಕ್ಕೆ ಸಿಲುಕಿದೆ.

ಶೀಘ್ರದಲ್ಲಿ ಸಿಎಂ ಆಯ್ಕೆ:

ಮುಖ್ಯಮಂತ್ರಿ ಆಯ್ಕೆ ಇನ್ನೂ ಆಗಿಲ್ಲ. ಶೀಘ್ರದಲ್ಲಿ ಆಯ್ಕೆ ಮಾಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿದ್ದಾರೆ.

ಮುಂದಿನ ೪೮ ರಿಂದ ೭೨ ಗಂಟೆಗಳ ಅವಧಿಯಲ್ಲಿ ನೂತನ ಸಚಿವ ಸಂಪುಟ ರಚನೆ ಮಾಡಲಾಗುವುದು. ಯಾರೂ ಗೊಂದಲಕ್ಕೆ ಅವಕಾಶ ಮಾಡಿಕೊಡುವುದು ಬೇಡ ಎಂದಿದ್ದಾರೆ.

ಸಂಭ್ರಮಾಚರಣೆ

ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎಂದು ಅವರ ಬೆಂಬಲಿಗರು ಕಾರ್ಯಕರ್ತರು ಸಂಭ್ರಮಾಚಣರೆಯಲ್ಲಿ ನಿರತರಾಗಿದ್ದಾರೆ.

ಇನ್ನೂ ಮುಖ್ಯಮಂತ್ರಿ ಅಯ್ಕೆಯಾಗದಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕುತೂಹಲಕ್ಕೆ ಎಡೆ ಮಾಡಿದೆ.