ಸಿಎಂ ಆಯ್ಕೆ ಹೈಕಮಾಂಡ್ ನಿರ್ಧಾರ

ಬೆಂಗಳೂರು,ಮೇ.೧೫- ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಪಕ್ಷ ಮತ್ತು ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಅದಕ್ಕೆ ನಾವು ಬದ್ಧ ಎಂದು ನೂತನ ಶಾಸಕ ವಿನಯ್ ಕುಲಕರ್ಣಿ ಹೇಳಿದ್ದಾರೆ.ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ ಎಲ್ಲರ ಸಹಕಾರದಿಂದ ಜನರಿಗೆ ಸುಭದ್ರ ಸರ್ಕಾರ ನೀಡುವುದು ನಮ್ಮ ಮುಂದಿರುವ ಏಕೈಕ ಉದ್ದೇಶ ಹೀಗಾಗಿ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಅವರು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ನಿವಾಸದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ವಿನಯ್ ಕುಲಕರ್ಣಿ, ಯಾರಿಗೆ ಯಾವ ಸ್ಥಾನಮಾನ ನೀಡಬೇಕು ಎನ್ನುವ ಸಂಬಂಧ ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ತಿಳಿಸಿದ್ದಾರೆ. ತಾವು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಚಿವರಾಗಿ ಕೆಲಸ ಮಾಡಿದ್ದೇನೆ ಪಕ್ಷ ಯಾವ ಜವಾಬ್ದಾರಿ ಕೊಡಬೇಕು ಎನ್ನುವುದನ್ನು ನಿರ್ಧರಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಪಕ್ಷದ ನಿರ್ಧಾರಕ್ಕೆ ಬದ್ಧ:
ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕೈಗೊಳ್ಳಲಿದ್ದಾರೆ ಇದಕ್ಕೆ ನಾವು ಬದ್ಧ ಎಂದು ಶಾಸಕ ವಿಜಯಾನಂದ ಕಾಶಪ್ಪನವರ್ ತಿಳಿಸಿದ್ದಾರೆ.