ಸಿಎಂ ಆರೋಗ್ಯ ಸ್ಥಿರ

ಬೆಂಗಳೂರು, ಏ. ೧೮- ಕೊರೊನಾ ಸೋಂಕಿನಿಂದ ನಗರದ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರ ಆರೋಗ್ಯ ಸ್ಥಿರವಾಗಿದೆ.
ಕಳೆದ ಎರಡು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪನವರ ಆರೋಗ್ಯ ಸ್ಥಿತರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ಕಛೇರಿ ಟ್ವೀಟ್‌ನಲ್ಲಿ ತಿಳಿಸಿದೆ.
ಮುಖ್ಯಮಂತ್ರಿ ಯಡಿಯೂರಪ್ಪನವರ ಆರೋಗ್ಯದ ಮೇಲೆ ತಜ್ಞ ವೈದ್ಯರ ತಂಡ ನಿರಂತರ ನಿಗಾವಹಿಸಿದೆ. ಮುಖ್ಯಮಂತ್ರಿಗಳು ಆಸ್ಪತ್ರೆಯಲ್ಲಿ ನೆಚ್ಚಿನ ಪುಸ್ತಕಗಳ ಓದಿನ ಜತೆಗೆ ಅಧಿಕಾರಿಗಳೊಂದಿಗೂ ಸಂಪರ್ಕದಲ್ಲಿದ್ದು, ಅಗತ್ಯ ಸೂಚನೆಯನ್ನು ನೀಡುತ್ತಿದ್ದಾರೆ ಎಂದು ಟ್ವೀಟರ್‌ನಲ್ಲಿ ಹೇಳಲಾಗಿದೆ.