ಸಿಎಂ ಜೊತೆ ವಿಡಿಯೋ ಸಂವಾದ…

ಕಲಬುರಗಿ: ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಸೇರಿದಂತೆ ಜಿಲ್ಲೆಯ ಶಾಸಕರು, ಸಂಸದರು ಮತ್ತು ವಿಧಾನ ಪರಿಷತ್ ಸದಸ್ಯರೊಂದಿಗೆ ವಿಡಿಯೋ ಸಂವಾದ ನಡೆಸಿದರು.