ಸಿಎಂ ಬದಲಾವಣೆಯಿಲ್ಲ : ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

ಶಿವಮೊಗ್ಗ, ಜ.4; ಸಿಎಂ ಬದಲಾವಣೆ ಕುರಿತು ಹೇಳಿಕೆ ನೀಡುತ್ತಿರುವ ಪಕ್ಷದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಪೆಸೆಟ್ ಕಾಲೇಜ್ ನಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.ನಾವು ಎಷ್ಟು ಬಾರಿ ಸಿಎಂ ಬದಲಾವಣೆ ಇಲ್ಲವೆಂದರೂ ಈ ವಿಷಯ ಮಾಧ್ಯಮಗಳಲ್ಲಿ ಪ್ರಸ್ತಾಪಗೊಳ್ಳುತ್ತಿದೆ. ಯತ್ನಾಳ್ ಯಾರು? ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.ಪಕ್ಷದಲ್ಲಿ ದೊಡ್ಡ ಮತ್ತು ಸಣ್ಣ ನಾಯಕರು ಇರುತ್ತಾರೆ. ಎಲ್ಲರೂ ಅವರವರ ಪರಿಮಿತಿಯಲ್ಲೇ ಕೆಲಸ ಮಾಡಬೇಕು. ಏನಾದರೂ ಸಮಸ್ಯೆ ಇದ್ದರೆ ಪಕ್ಷದಲ್ಲಿ ಚರ್ಚೆ ಮಾಡಬೇಕು. ಅದನ್ನು ನಿರ್ಧಾರ ಮಾಡುವುದು ನಾವು. ಯಡಿಯೂರಪ್ಪ ಸರ್ಕಾರ ಅತ್ಯುತ್ತಮ ಕೆಲಸ ಮಾಡುತ್ತಿದೆ  ಎಂದರು.