ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ

ದಾವಣಗೆರೆ,ಜೂ.8: ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ. ಸಿಎಂ ಯಡಿಯೂರಪ್ಪನವರ ನಿರ್ಧಾರಕ್ಕೆ ನಾವೆಲ್ಲರೂ ಬದ್ಧವಾಗಿದ್ದೇವೆಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಟಿವಿ, ಪೇಪರ್‌ನಲ್ಲಿ ಬರಬೇಕೆಂಬ ಕಾರಣಕ್ಕೆ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುತ್ತಾರೆ. ಸಿ.ಪಿ. ಯೋಗೀಶ್ವರ ದೆಹಲಿಗೆ ಹೋಗಿರುವ ವಿಚಾರ ನನಗೆ ಹೆಚ್ಚಾಗಿ ಗೊತ್ತಾಗಿಲ್ಲ. ಹೀಗಾಗಿ, ಆ ಬಗ್ಗೆ ಏನೂ ಮಾತನಾಡುವುದಿಲ್ಲ ಎಂದು ಹೇಳಿದರು.
ಮನೆ ಅಂದ ಮೇಲೆ ಸಣ್ಣಪುಟ್ಟ ವ್ಯತ್ಯಾಸ ಇರುವುದು ಸಾಮಾನ್ಯ. ಅದನ್ನು ಪಕ್ಷದ ಹಿರಿಯರು ಸರಿ ಮಾಡುತ್ತಾರೆ. ಬಿಜೆಪಿಯಲ್ಲಿ ಮೂಲ ಬಿಜೆಪಿಗರು ಮತ್ತು ವಲಸಿಗರೆಂಬ ಪ್ರಶ್ನೆಯೇ ಇಲ್ಲ. ಏಕೆಂದರೆ, ಬಿಜೆಪಿಯಲ್ಲಿರುವ ಬಹುತೇಕರು ಜೆಡಿಎಸ್, ಕಾಂಗ್ರೆಸ್‌ನಿAದ ಬಂದವರೇ ಆಗಿದ್ದಾರೆ. ನಾವು 17 ಜನ ಶಾಸಕರು ಕಾಂಗ್ರೆಸ್-ಜೆಡಿಎಸ್ ತೊರೆದು ಬಿಜೆಪಿಗೆ ಬಂದಿದ್ದೇವೆ. ನಮಗೆ ನೀಡಬೇಕಾದ ಎಲ್ಲ ಗೌರವ ನೀಡಿದ್ದಾರೆ. ಯಾವುದೇ ಅಸಮಾಧಾನ ಇಲ್ಲ ಎಂದು ಅಸಮಾಧಾನ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.