ಸಿಎಂ ಭೇಟಿ ಮಾಡಿದ ಶಶೀಲ ನಮೋಶಿ

ಕಲಬುರಗಿ ನ 12:ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿದ ಶಶೀಲ್ ಜಿ. ನಮೋಶಿ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರನ್ನು ಭೇಟಿಯಾಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪರವರು ನಮೋಶಿಯವರ ಆಯ್ಕೆಗೆ ಹರ್ಷವ್ಯಕ್ತಪಡಿಸಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಿರಿಯ ರಾಜಕಾರಣಿಯಾದ ನೀವು ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚು ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಕ್ರಿಯರಾಗಬೇಕೆಂದು ನಮೋಶಿಯವರಿಗೆ ಸಲಹೆ ನೀಡಿದರು. ಪಕ್ಷದ ಎಲ್ಲಾ ಮುಖಂಡರು ಈ ಚುನಾವಣೆಯಲ್ಲಿ ತೋರಿಸಿದ ಒಗ್ಗಟ್ಟು ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ತೋರಿಸಬೇಕೆಂದು ಸೂಚಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ಸಂಸದ ಡಾ. ಉಮೇಶ ಜಾಧವ, ಶಾಸಕ ಹಾಗೂ ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಶಾಸಕ ಹಾಗೂ ಎನ್.ಇ.ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ, ಸುನೀಲ ವಲ್ಲ್ಯಾಪೂರ, ಬಿಜೆಪಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಮಹಾನಗರ ಪಾಲಿಕೆ ಸದಸ್ಯ ವಿಠಲ ಜಾಧವ, ಗುರುಕಾಮಾ ಉಪಸ್ಥಿತರಿದ್ದರು.