ಸಿಎಂ ಮಾಧ್ಯಮ ಸಲಹೆಗಾರರಾಗಿ ಕೆ.ವಿ.ಪ್ರಭಾಕರ್ ನೇಮಕ

ಕೋಲಾರ,ಮೇ,೨೩-ನಗರದ ಕುರುಬರಪೇಟೆ ನಿವಾಸಿಯಾಗಿದ್ದು, ಇದೀಗ ಬೆಂಗಳೂರಿನಲ್ಲಿ ವಾಸವಾಗಿರುವ ಹಿರಿಯ ಪತ್ರಕರ್ತ ಕೆ.ವಿ.ಪ್ರಭಾಕರ್‌ರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಿದೆ.
ನಗರದ ಕೋಲಾರದ ಸ್ಥಳೀಯ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ಮೂಲಕ ಅನುಭವ ಪಡೆದು ಕೊಂಡು ರಾಜ್ಯ ಮಟ್ಟದ ಹಲವು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿ ನಂತರ ಜನಪ್ರತಿನಿಧಿಗಳಲ್ಲಿ ಗುರುತಿಸಿ ಕೊಂಡು ನಂತರ ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಮಾಧ್ಯಮ ಸಲಹೆಗಾರರಾಗಿ ಸೇವೆ ಸಲ್ಲಿಸಿರುವ ಪ್ರಭಾಕರ್, ಇದೀಗ ಮತ್ತೆ ನೇಮಕಗೊಂಡಿದ್ದು, ಮೇ.೨೦ ರಿಂದಲೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಅವರನ್ನು ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಿಸಲಾಗಿದೆ., ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ವಿ.ಸುನಂದಮ್ಮ ಆದೇಶ ಹೊರಡಿಸಿದ್ದಾರೆ.