ಸಿಎಂ ಮೌನ ಮುರಿಯಲಿ: ಸಿದ್ದು

ಬೆಳಗಾವಿ, ಮಾ 29: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ ಪ್ರತಿಕ್ರಿಯೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಗುಡುಗಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ವಿಚಾರವಾಗಿ ಮುಖ್ಯಮಂತ್ರಿಗಳು ಮೌನವಾಗಿದ್ದಾರೆ. ಒಂದು ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ಸಿಡಿ ವಿಚಾರವಾಗಿ ಮಾತನಾಡಬೇಕು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಚರ್ಚೆ ನಡೆಯುತ್ತಿದೆ ಎಂದರು.
ಕೇಂದ್ರದ ಮೋದಿ ಸರಕಾರ ದೇಶವನ್ನು ಹಾಳು ಮಾಡುತ್ತಿದೆ. ಬಡವರು, ರೈತರು ಬದುಕಲು ಸಾಧ್ಯವಾಗುತ್ತಿಲ್ಲ. ತೈಲಬೆಲೆ ಹೆಚ್ಚಳವಾಗಿದೆ. ಕರ್ನಾಟಕದಲ್ಲಿ ಯಡಿಯೂರಪ್ಪ ಅವರ ಸರಕಾರವು ಕೂಡಾ ಎಲ್ಲ ವಿಚಾರಗಳಲ್ಲಿ ವಿಫಲವಾಗಿದೆ. ಕೇಂದ್ರ ಸರಕಾರ ಸವಾರ್ಧಿಕಾರ ಧೋರಣೆ ಮಾಡುತ್ತಿದೆ. ಬಿಜೆಪಿ ಸಂಸದರು ಕೇಂದ್ರ ಸರಕಾರದ ಗುಲಾಮರು ಎಂದು ಸಿದ್ದರಾಮಯ್ಯ ಆರೋಪಿಸಿದರು.