ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನಸ್ಸೀರ್ ಆಹಮದ್

ಕೋಲಾರ,ಜೂ,೨:ವಿಧಾನ ಪರಿಷತ್ ಸದಸ್ಯರಾದ ನಸ್ಸೀರ್ ಆಹಮದ್ ಅವರು ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ಇಂದು ಅಧಿಕೃತವಾಗಿ ನೇಮಕ ಮಾಡಲಾಗಿದೆ ಹಾಗೂ ಮುಂದಿನ ಅದೇಶದವರೆಗೆ ಈ ಆದೇಶವು ಜಾರಿಯಲ್ಲಿರುವುದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿ ವೀರಭದ್ರ ಹಂಚನಾಳ ಅಧಿಸೂಚನೆ ಪತ್ರದಲ್ಲಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯಪಾಲರ ಅದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಪರ ಕಾರ್ಯದರ್ಶಿ ವೀರಭದ್ರ ಹಂಚನಾಳ ಅವರು ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಲಾಗಿದ್ದು ಸಂಪುಟ ದರ್ಜೆಯ ಸಚಿವರ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡ ಬೇಕೆಂದು ಸಂಬಂಧ ಪಟ್ಟ ಇಲಾಖೆಗಳಿಗೆ ಸೂಚಿಸಿದ್ದಾರೆ.
ನಸ್ಸೀರ್ ಅಹಮದ್ ಅವರು ಒಂದು ಭಾರಿ ಶಾಸಕರಾಗಿ, ಕೋಲಾರ ಮತ್ತು ಚಿಕ್ಕಬಳ್ಳಾಪು ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಸದಸ್ಯರಾಗಿ ಮುಂದುವರೆದಿದ್ದು, ಈಗಾ ನೂತನವಾಗಿ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ಅಧಿಕೃತವಾಗಿ ನೇಮಕ ಗೊಂಡಿದ್ದು ಸಂಪುಟ ದರ್ಜೆಯ ಸಚಿವರ ಸ್ಥಾನಮಾನಗಳನ್ನು ಪಡೆದಿದ್ದಾರೆ.