ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ: ಎ.ರಾಜಾಗೆ ಎರಡು ದಿನ ಪ್ರಚಾರ ನಿಷೇಧಿಸಿದ ಆಯೋಗ

ಚೆನ್ನೈ, ಏ.1- ಮುಖ್ಯಮಂತ್ರಿ ವಳನಿಸ್ವಾಮಿ ತಾಯಿಯ ಬಗ್ಗೆ ಅವಹೇಳನಕಾರಿ‌ ಹೇಳಿಕೆ ನೀಡಿದ‌ ಹಿನ್ನೆಲೆಯಲ್ಲಿ ಡಿಎಂಕೆ ಮುಖಂಡ ಎ.ರಾಜಾ ಅವರು 48 ಗಂಟೆಗಳ ಕಾಲ ಚುನಾವಣಾ ಪ್ರಚಾರವನ್ನು ಚುನಾವಣಾ ಆಯೋಗ ನಿಷೇಧಿಸಿದೆ.
ತಮಿಳುನಾಡು ಚುನಾವನಾ ಪ್ರಚಾರದ ವೇಳೆ ಎ. ರಾಜಾ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ತಾಯಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಪಳನಿಸ್ವಾಮಿ ಅವರ ಜನನ ಅಕ್ರಮವಾದದ್ದು ಎಂದು ನಿಂದಿಸಿದ್ದರು.
ಈ ಹೇಳಿಜೆ ತಮಿಳುನಾಡಿನಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೆ, ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರನ್ನೂ ನೀಡಲಾಗಿತ್ತು. ಈ ಸಂಬಂಧ ಎ. ರಾಜಾ ಅವರಿಗೆ ನೊಟೀಸ್​ ನೀಡಿದ್ದ ಚುನಾವಣಾ ಆಯೋಗ ಇಂದು ಈ ವಿಚಾರಣೆ ನಡೆಸಿ “ಎ. ರಾಜಾ ಅವಹೇಳನಕಾರಿ ಹೇಳಿಕೆ ನೀಡಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಅವರು ಮುಂದಿನ 48 ಗಂಟೆಗಳ ಕಾಲ ಯಾವ ಚುನಾವಣಾ ಪ್ರಚಾರದಲ್ಲೂ ಭಾಗವಹಿಸದಂತೆ ಚುನಾವಣಾ ಆಯೋಗ ನಿಷೇಧ ಹೇರಿ ಆದೇಶ ಹೊರಡಿಸಿದೆ .
ಚೆಪಾಕ್-ತಿರುವಳ್ಳಿಕೇಣಿಯಲ್ಲಿ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ, “ಪಳನಿಸ್ವಾಮಿ ಜನನ ಅಕ್ರಮ ಸಂಬಂಧದಿಂದ ಮತ್ತು ಅಕಾಲಿಕ ಜನನ” ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಈ ಹಿಂದೆಯೂ ಮುಖ್ಯಮಂತ್ರಿಯನ್ನು ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರ ಚಪ್ಪಲಿಗಿಂತ ಒಂದು ರೂಪಾಯಿ ಕಡಿಮೆ ಎಂದು ಕರೆದಿದ್ದರು.ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ ಡಿಎಂಕೆ ನಾಯಕ ಎ.ರಾಜಾ ವಿರುದ್ಧ ಐಪಿಸಿಯ ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 294 ಬಿ (ಸಾರ್ವಜನಿಕ ಸ್ಥಳದಲ್ಲಿ ಕೆಟ್ಟ ಭಾಷೆ) ಮತ್ತು ಜನರ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 127 (ಚುನಾವಣಾ ಸಭೆಗಳಲ್ಲಿ ಅಡಚಣೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.