ಸಿಎಂ ವಿರುದ್ಧ ಪ್ರಣವಾನಂದಶ್ರೀ ವಾಗ್ದಾಳಿ

ಗಂಗಾವತಿ,ಡಿ.೧೦-ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ರಣವಾನಂದ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದಿದ್ದಾರೆ. ಬೆಂಗಳೂರಿನಲ್ಲಿ ಈಡಿಗ ಸಮಾವೇಶ ನಡೆಯಲಿದೆ ಈ ವಿಚಾರವಾಗಿ ಬಿ.ಕೆ .ಹರಿಪ್ರಸಾದ ಅವರನ್ನು ಕಡೆಗಣಿಸಲಾಗಿದೆ,ಸಿದ್ದರಾಮಯ್ಯ ಅವರು ಬಿ.ಕೆ.ಹರಿಪ್ರಸಾದ ಅವರನ್ನು ಮೂಲೆಗುಂಪು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗದ ನಾಯಕರು ಪ್ರಬಲ ನಾಯಕರಾಗಿ ಬೆಳೆಯಬಾರದು ಎಂಬ ಉದ್ದೇಶದಿಂದ ಮೂಲೆಗುಂಪು ಮಾಡುತ್ತಿದ್ದಾರೆ.ಹರಿಪ್ರಸಾದ್ ಅವರನ್ನು ದ್ದೇಶಪೂರ್ವಕವಾಗಿ ಸಮಾವೇಶದಿಂದ ದೂರ ಇಡಲಾಗಿದೆ. ಮಧು ಬಂಗಾರಪ್ಪ ಅವರನ್ನು ಬಳಸಿಕೊಂಡು ಸಿಎಂ ಸಿದ್ದರಾಮಯ್ಯ ಸಮಾಜದ ಮೇಲೆ ದಾಳಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಈಡಿಗ ಬಿಲ್ಲವ ಮತ್ತು ನಾಮಧಾರಿ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಣವಾನಂದ ಸ್ವಾಮೀಜಿ ಸೇರಿದಂತೆ ಹಲವರ ಸಮ್ಮುಖದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ಉದ್ದೇಶಿಸಲಾಗಿದೆ. ರಾಜಕೀಯ ಕುತಂತ್ರಕ್ಕಾಗಿ ಕಾಂಗ್ರೆಸ್ ಸಮುದಾಯದ ಸಮಾವೇಶ ನಡೆಸುತ್ತಿದ್ದಾರೆ ಎಂದು ಹರಿಪ್ರಸಾದ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ