
ಬೆಂಗಳೂರು,ಮೇ೧೩:ಈ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್, ಶಾಮನೂರು ಶಿವಶಂಕರಪ್ಪ, ಆರ್.ವಿ. ದೇಶ್‌ಪಾಂಡೆ, ಡಾ. ಜಿ. ಪರಮೇಶ್ವರ್, ರಾಮಲಿಂಗಾರೆಡ್ಡಿ, ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಘಟಾನುಘಟಿ ನಾಯಕರುಗಳು ಜಯಶಾಲಿಯಾಗಿದ್ದಾರೆ. ಆಡಳಿತ ವಿರೋಧಿ ಅಲೆಯ ನಡುವೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೆಲುವಿನ ದಡ ಸೇರಿದ್ದಾರೆ.
ಶಿಗ್ಗಾಂವ್ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಅಭ್ಯರ್ಥಿಯನ್ನು ಪರಾಜಯಗೊಳಿಸಿ ಮತ್ತೆ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.
ಸಿದ್ದು-ಡಿಕೆಶಿ ಗೆಲುವು
ಸಿಎಂ ಹುದ್ದೆಯ ರೇಸ್‌ನಲ್ಲಿರುವ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಗೆಲುವು ಸಾಧಿಸಿದ್ದಾರೆ. ಹಾಗೆಯೇ, ಎಂ.ಬಿ. ಪಾಟೀಲ್, ಶಾಮನೂರು ಶಿವಶಂಕರಪ್ಪ, ಡಾ. ಜಿ. ಪರಮೇಶ್ವರ್, ರಾಮಲಿಂಗಾರೆಡ್ಡಿ ಇವರುಗಳೆಲ್ಲ ಮತ್ತೆ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಮಾಜ ಮುಖ್ಯಮಂತ್ರಿ ಜೆಡಿಎಸ್‌ನ ಕುಮಾರಸ್ವಾಮಿಯವರು ಚೆನ್ನಪಟ್ಟಣದಿಂದ ಗೆಲುವು ಸಾಧಿಸಿದ್ದಾರೆ.