ಸಿಎಫ್‌ಇ ನಾಯಕ ರವೂಫ್ ಬಂಧನ ಖಂಡಿಸಿ ಪ್ರತಿಭಟನೆ


ಮಂಗಳೂರು, ಡಿ.೨೭- ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೂಫ್ ಶರೀಫ್ ಅವರನ್ನು ಈಡಿ ಮೂಲಕ ಬಂಧಿಸಿರುವ ಕ್ರಮವನ್ನು ಖಂಡಿಸಿ ಸಿಎಫ್‌ಐ ಕಾರ್ಯಕರ್ತರು ದ.ಕ.ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಶನಿವಾರ ನಡೆದಿದೆ. ಡಿಸಿ ಕಚೇರಿಯ ಮುಂದೆ ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ ಡಿಸಿ ಕಚೇರಿ ದಾಟಿ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರ ಪೈಕಿ ನಾಯಕರು ಹಾಗೂ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಬಂಧನ ಖಂಡಿಸಿ ಸಿಎಫ್‌ಐ ಕಾರ್ಯಕರ್ತರು ಪ್ರತಿಭಟನಾ ಮಾರ್ಚ್ ನಡೆಸಲು ಸಿದ್ಧತೆ ನಡೆಸಿದ್ದು, ಆದರೆ ಪೊಲೀಸರು ಅನುಮತಿ ನೀಡದ ಕಾರಣ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.