ಸಿಎಸ್‌ಕೆ -ಕೆಕೆಆರ್ ಹಣಾಹಣಿ


ಮುಂಬೈ, ಏ. ೨೧- ಐಪಿಎಲ್ ಕ್ರಿಕೆಟ್ ನಲ್ಲಿಂದು ಚೆನ್ನೈ ಸೂಪರ್ ಕಿಂಗ್ ಮತ್ತು ಕೊಲ್ಕತ್ತಾ ನೈಟ್ ರೈಡರ್‍ಸ್ ನಡುವೆ ಪಂದ್ಯ ನಡೆಯಲಿದೆ.
ಧೋನಿ ನೇತೃತ್ವದ ಸಿಎಸ್‌ಕೆ ಹ್ಯಾಟ್ರಿಕ್ ಗೆಲುವಿನತ್ತ ಚಿತ್ತಹರಿಸಿದೆ. ಕಳೆದ ಬಾರಿಯ ಐಪಿಎಲ್‌ನಲ್ಲಿ ಪ್ಲೇ ಆಫ್ ಹಂತದಿಂದ ಹೊರಬಿದ್ದಿದ್ದ ಚೆನ್ನೈ ಈ ಬಾರಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ.
ತಂಡದಲ್ಲಿ ಉತ್ತಮ ಬ್ಯಾಟ್ಸ್‌ಮೆನ್‌ಗಳು ಬೌಲರ್‌ಗಳಿಂದ ಕೂಡಿದ್ದು ಉತ್ತಮ ಪ್ರದರ್ಶನ ನೀಡುವ ತವಕದಲ್ಲಿದ್ದಾರೆ. ಅದರಲ್ಲೂ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ಬಲವಾಗಿ ಮೆಚ್ಚಿಕೊಂಡಿದೆ. ಉತ್ತಮ ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲೂ ತಮ್ಮ ಕೈ ಚಳಕ ಪ್ರದರ್ಶಿಸಿದ್ದಾರೆ. ಇಂದಿನ ಪಂದ್ಯದಲ್ಲೂ ಉತ್ತಮ ಆಟವಾಡುವ ಹುಮ್ಮಸ್ಸಿನಲ್ಲಿದ್ದಾರೆ.
ಮತ್ತೊಂದೆಡೆ ಮೊರ್ಗನ್ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್‍ಸ್ ತಂಡದ ಕಳಪೆ ಪ್ರದರ್ಶನ ಮುಂದುವರಿದಿದ್ದು, ಹಿಂದಿನ ಪಂದ್ಯ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಸತತ ಎರಡು ಪಂದ್ಯಗಳನ್ನು ಸೋತಿರುವ ಕೆಕೆಆರ್ ಸೋಲಿನ ದವಡೆಯಿಂದ ಪಾರಾಗಲು ತೀವ್ರ ಕಸರತ್ತು ನಡೆಸಬೇಕಾಗಿದೆ.
ವಾಂಖೆಡೆ ಕ್ರೀಡಾಂಗಣ ಬ್ಯಾಟಿಂಗ್‌ಗೆ ಉತ್ತಮವಾಗಿದ್ದು, ರನ್ ಹೊಳೆ ಹರಿಯಲಿದೆ. ಮೊದಲು ಫೀಲ್ಡಿಂಗ್ ಮಾಡುವ ತಂಡಕ್ಕೆ ಲಾಭವಾಗುವ ಸಾಧ್ಯತೆ ಹೆಚ್ಚಾಗಿದೆ.
ಎಸ್‌ಆರ್‌ಎಚ್ ಪಂಜಾಬ್ ಹಣಾಹಣಿ
ಚೆನ್ನೈನಲ್ಲಿ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್‍ಸ್ ನಡುವೆ ಪಂದ್ಯ ನಡೆಯಲಿದೆ. ಮೂರು ಪಂದ್ಯಗಳಲ್ಲಿ ಎಸ್‌ಆರ್‌ಎಚ್ ಸೋಲು ಅನುಭವಿಸಲಿದೆ. ಕೇನ್ ವಿಲಿಯಮ್ಸ್‌ಗೆ ಅವಕಾಶ ಸಿಗುವ ಸಾಧ್ಯತೆಯಿದೆ.
ಪಂಜಾಬ್ ಸ್ಥಿತಿಯೂ ಉತ್ತಮವಾಗಿಲ್ಲ. ಮೂರು ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಹೀಗಾಗಿ ಸೋಲು ತಪ್ಪಿಸಿಕೊಳ್ಳಲು ಉತ್ತಮ ಪ್ರದರ್ಶನ ನೀಡಬೇಕಾದ ಒತ್ತಡಕ್ಕೆ ಸಿಲುಕಿದೆ.