ಸಿಜಿ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ

ಸಂಜೆವಾಣಿ ವಾರ್ತೆ

ದಾವಣಗೆರೆ.ಮಾ.೧೨: ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ 108 ಅಂಬ್ಯುಲೆನ್ಸ್ ನ ಇಎಂಆರ್ ಐ ಗ್ರೀನ್ ಹೆಲ್ತ್ ಸರ್ವೀಸ್ ಸಂಸ್ಥೆಯ ಜಿಲ್ಲಾ ವ್ಯವಸ್ಥಾಪಕ ವಿನಯ್ ಕುಮಾರ್ ಹಾಗೂ ಅಭಿಲಾಷ್ ಪಾಟೆಲ್ ಅವರು ಸಿಬ್ಬಂದಿಯೊಂದಿಗೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಮಹಿಳಾ ವೈದ್ಯರು, ಶೂಶ್ರೂಷಕರುಷಕರು ಹಾಗೂ ಮಹಿಳಾ ಸಿಬ್ಬಂದಿಗಳಿಗೆಳಿಗೆ ಶುಭಾಶಯಗಳನ್ನು ತಿಳಿಸಿದರು.