ಸಿಜೆಐ ಹುದ್ದೆಗೆ ನ್ಯಾ.ರಮಣ ಹೆಸರು ಶಿಫಾರಸು

ನವದೆಹಲಿ,ಮಾ. ೨೪- ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗೆ ಎನ್.ವಿ. ರಮಣ ಅವರ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ.
ಈ ಸಂಬಂಧ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೋಬ್ಡೆ ರಮಣ ಅವರ ಹೆಸರನ್ನು ಶಿಫಾರಸ್ಸು ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ.
ಹಾಲಿ ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಏ. ೨೩ ರಂದು ನಿವೃತ್ತಿ ಹೊಂದಲಿದ್ದಾರೆ. ಈ ಹಿನ್ನೆಲೆಯಲ್ಲಿ ರಮಣ ಅವರ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ.
ಮುಂದಿನ ಮುಖ್ಯ ನ್ಯಾಯಮೂರ್ತಿ ನೇಮಕ ಕುರಿತು ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಕೇಂದ್ರ ಕಾನೂನು ಸಚಿವರು ತಿಳಿಸಿದ್ದರು.
ಈಗ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಈ ವಿಷಯವನ್ನು ಪ್ರಧಾನಿಯವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರವಾನಿಸಲಾಗುತ್ತದೆ.
ಮುಖ್ಯ ನ್ಯಾಯಮೂರ್ತಿ ಅವರನ್ನು ನೇಮಕ ಮಾಡುವ ಸಂದರ್ಭದಲ್ಲಿ ಅವರ ದೈಹಿಕ ಕ್ಷಮತೆಯ ಬಗ್ಗೆ ಅನುಮಾನಗಳು ಕಂಡುಬಂದಲ್ಲಿ ಇತರ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚನೆ ನಡೆಸಲಾಗುತ್ತದೆ.
ನ್ಯಾಯಮೂರ್ತಿ ರಮಣ ಅವರು ಆ. ೨೭, ೧೯೫೭ರಲ್ಲಿ ಜನಿಸಿದ್ದು, ಅವರ ಸೇವಾವಧಿ ೨೦೨೨, ಆಗಸ್ಟ್‌ತಿಂಗಳವರೆಗೆ ಇದೆ.