
ಅಫಜಲಪುರ:ಎ.7: ತಾಲೂಕಿನ ಬಿಲ್ವಾಡ (ಬಿ) ಗ್ರಾಮದ ರೈತ ಭೋಗಪ್ಪ ತಂದೆ ಯಲ್ಲಪ್ಪ ಆಲೆನವರ (60) ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗ ಗುರುವಾರ ಸಂಜೆ 6 ಗಂಟೆಗೆ ಸಿಡಿಲು ಬಡಿದು ಮೃತ ಪಟ್ಟಿರುವ ದುರ್ಘಟನೆ ಸಂಭವಿಸಿದೆ.
ಮೃತರಿಗೆ ಎರಡು ಜನ ಗಂಡು ಮಕ್ಕಳು, ಮೂರು ಜನ ಹೆಣ್ಣು ಮಕ್ಕಳು ಇದ್ದಾರೆ.ಈ ಕುರಿತು ಅಫಜಲಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.