ಸಿಡಿ ಕೇಸ್ ಕಮೀಷನರ್ ಡಿಸಿಪಿಗೆ ಹೈಕೋರ್ಟ್ ರಿಲೀಫ್

ಬೆಂಗಳೂರು, ನ.25-ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಪ್ರಕರಣ ದಾಖಲಿಸಿಕೊಳ್ಳದೆ ನಿರ್ಲಕ್ಷ್ಯವಹಿಸಿದ ಆರೋಪ ಸಂಬಂಧ ತನಿಖೆ ನಡೆಸುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿರುವ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿರುವ ಆದೇಶವನ್ನು ‌ರದ್ದು ಮಾಡುವಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತ್ ಹಾಗೂ ಕಬ್ಬನ್ ಪಾರ್ಕ್ ಠಾಣೆಯ ಇನ್​ಸ್ಪೆಕ್ಟರ್ ಮಾರುತಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸದ ಹೈಕೋರ್ಟ್ ಮಧ್ಯಂತರ ತಡೆ ನೀಡಿ ರಿಲೀಫ್ ನೀಡಿದೆ
ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನೇಶ್ ಕಲ್ಲಹಳ್ಳಿ ದೂರು ಆಧರಿಸಿ ಕೇಸ್ ದಾಖಲಿಸದ‌ ಹಿನ್ನೆಲೆ ಕರ್ತವ್ಯ ಲೋಪ ಆರೋಪದಡಿ ಖಾಸಗಿ ದೂರು ಸಲ್ಲಿಸಲಾಗಿತ್ತು. ಪೊಲೀಸ್ ಆಯುಕ್ತ ಕಮಲ್ ಪಂತ್ ಡಿಸಿಪಿ ಎಮ್.ಎನ್. ಅನುಚೇತ್ ಇನ್ಸ್​ಪೆಕ್ಟರ್ ಬಿ. ಮಾರುತಿ ವಿರುದ್ಧ ತನಿಖೆಗೆ ಆದೇಶ ಹೊರಡಿಸಲಾಗಿತ್ತು.
ರಮೇಶ್ ಜಾರಕಿಹೊಳಿ ಕೇಸ್‌ನ ತನಿಖೆ ಮುಕ್ತಾಯವಾಗಿದೆ. ಅಂತಿಮ ವರದಿ ಸಲ್ಲಿಸಲು ಅನುಮತಿ ಕೋರಲಾಗಿದೆ. ಪೊಲೀಸ್ ಅಧಿಕಾರಿಗಳ ವಿರುದ್ಧದ ತನಿಖೆ ಆದೇಶಕ್ಕೆ ತಡೆ ನೀಡಬೇಕೆಂದು ಹೈಕೋರ್ಟ್‌ಗೆ ಎಸ್‌ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು.
ದಿನೇಶ್ ಕಲ್ಲಹಳ್ಳಿ ದೂರು ಆಧರಿಸಿ ಕೇಸ್ ದಾಖಲಿಸದ‌ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ಖಾಸಗಿ ದೂರು ದಾಖಲಾಗಿತ್ತು. ಆದರ್ಶ್ ಅಯ್ಯರ್ ಖಾಸಗಿ ದೂರು ಸಲ್ಲಿಸಿದ್ದರು. ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರನ್ನಾಧರಿಸಿ ಎಫ್‍ಐಆರ್ ದಾಖಲಿಸದ ಸಂಬಂಧ ತನಿಖೆ ನಡೆಸಲು ನಗರದ 8ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿ ಮೂವರು ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.
ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿರುವ ತನಿಖೆಯ ಆದೇಶವನ್ನು ರದ್ದುಗೊಳಿಸಬೇಕೆಂದು ಮೂವರು ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದರು. ಖಾಸಗಿ ದೂರು ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿರುವ ಆದೇಶವನ್ನು ರದ್ದು ಪಡಿಸಬೇಕು ಎಂದು ಕೋರಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್, ಇನ್​ಸ್ಪೆಕ್ಟರ್ ಮಾರುತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ಯಾವುದೇ ಕರ್ತವ್ಯಲೋಪ ಎಸಗಿಲ್ಲ. ಅಲ್ಲದೆ, ದೂರುದಾರರು ಸಂತ್ರಸ್ಥೆಗೆ ಸಂಬಂಧಿಸಿದ ವಿವರಗಳನ್ನು ಆರಂಭದಲ್ಲಿ ಒದಗಿಸಿರಲಿಲ್ಲ. ಪ್ರಕರಣದಲ್ಲಿ ಆರೋಪಿತ ಮಾಜಿ ಸಚಿವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ. ಈ ಮಧ್ಯೆ ಖಾಸಗಿ ದೂರು ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಹೊರಡಿಸಿದೆ. ಈ ನಿಟ್ಟಿನಲ್ಲಿ ತಮ್ಮ ವಿರುದ್ಧ ಮ್ಯಾಜಿಸ್ಟ್ರೇಟ್ ಕೋರ್ಟ್ ಹೊರಡಿಸಿರುವ ಆದೇಶ ರದ್ದು ಮಾಡಬೇಕು ಎಂದು ಅಧಿಕಾರಿಗಳು ಕೋರಿದ್ದರು.
ಬಿಜೆಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಮತ್ತು ಸುಲಿಗೆ ಆರೋಪದ ಪ್ರತಿದೂರು ಕುರಿತ ವರದಿಗಳನ್ನು ಪರಿಶೀಲಿಸುವಂತೆ ಕರ್ನಾಟಕ ಹೈಕೋರ್ಟ್ ನಗರದ ಪೊಲೀಸ್ ವಿಶೇಷ ತನಿಖಾ ತಂಡದ ಮುಖ್ಯಸ್ಥರಿಗೆ ಈ ಹಿಂದೆ ಸೂಚಿಸಿತ್ತು.