ಸಿಡಿ ಪ್ರಕರಣ ಕಾದು ನೋಡೋಣ: ವಿಜಿ

ದಾವಣಗೆರೆ,ಮಾ.೩೧- ಸಿಡಿ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಯುತ್ತಿರುವುದು ಯಾವ ಸಂದರ್ಭದಲ್ಲಿ ತಿರುವು ಪಡೆಯುತ್ತದೋ ಕಾದು ನೋಡೋಣ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ೨೮ ದಿನಗಳಿಂದ ಯಾರು ಯಾರು ಯಾವ ಯಾವ ಹೇಳಿಕೆ ನೀಡುತ್ತಿದ್ದಾರೆ. ಯಾರು ಯಾವ ರೀತಿ ಮಾತನಾಡುತ್ತಿದ್ದಾರೆ. ಆರೋಪ-ಪ್ರತ್ಯಾರೋಪಗಳು ಎಲ್ಲವನ್ನೂ ರಾಜ್ಯದ ಜನ ಗಮನಿಸುತ್ತಿದ್ದಾರೆ ಎಂದರು.
ಈ ಸಿಡಿ ಪ್ರಕರಣದ ಬಗ್ಗೆ ಈಗ ಎಸ್‌ಐಟಿ ತನಿಖೆ ನಡೆದಿದೆ. ಮುಂದೆ ಇದು ಯಾವ ತಿರುವು ಪಡೆಯುತ್ತದೋ ಕಾದು ನೋಡೋಣ ಎಂದು ಮಾರ್ಮಿಕವಾಗಿ ಹೇಳಿದರು.
ಸಿಡಿ ಪ್ರಕರಣ ಉಪ ಚುನಾವಣೆಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಉಪಚುನಾವಣೆಯಲ್ಲಿ ಬಿಜೆಪಿ ಮೂರು ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಿದೆ. ಅಭಿವೃದ್ಧಿ, ನಾಯಕತ್ವದ ಆಧಾರದ ಮೇಲೆ ಬೆಳಗಾವಿಯಲ್ಲಿ ದೊಡ್ಡ ಅಂತರದಿಂದ ಗೆಲ್ಲುತ್ತೇವೆ ಎಂದರು.
ಮಸ್ಕಿ ಉಪ ಚುನಾವಣೆಯಲ್ಲಿ ಸಚಿವ ಶ್ರೀರಾಮುಲು, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ತಾವು ಸೇರಿದಂತೆ ಮೂವರು ಚುನಾವಣಾ ಉಸ್ತುವಾರಿ ಹೊತ್ತಿದ್ದೇವೆ. ಇಲ್ಲೂ ಬಿಜೆಪಿ ಅಭ್ಯರ್ಥಿ ಪ್ರತಾಪ್‌ಗೌಡ ಪಾಟೀಲ್ ಗೆಲುವು ನಿಶ್ಚಿತ, ಬಸವ ಕಲ್ಯಾಣದಲ್ಲೂ ಬಿಜೆಪಿ ಜಯಗಳಿಸಲಿದೆ ಎಂದರು.