ಸಿಡಿ : ರಮೇಶ್ ವಿಚಾರಣೆಗೆ ಹಾಜರು

ಬೆಂಗಳೂರು, ಮಾ. ೨೯- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿಗೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ರಾಜ್ಯ ಹೈಕೋರ್ಟಿನ ಮುಖ್ಯನ್ಯಾಯಾಧೀಶರಿಗೆ ಪತ್ರ ಬರೆದಿರುವ ಬೆನ್ನಲ್ಲೇ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಎಸ್‌ಐಟಿ ಮಂದೆ ವಿಚಾರಣೆಗೆ ಹಾಜರಾಗಿದ್ದು, ಅಧಿಕಾರಿಗಳು ಅವರನ್ನು ವಿಚಾರಣೆಗೆ ಒಳಪಡಿಸಿದರು. ಪ್ರಕರಣದ ಯುವತಿ ತಮ್ಮ ವಕೀಲರ ಮೂಲಕ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದರು ಈ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿ, ಕಬ್ಬನ್ ಪಾರ್ಕ್ ಪೊಲೀಸರು ಅದನ್ನು ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತಂಡಕ್ಕೆ ವರ್ಗಾಯಿಸಿದ್ದರು.
ದೂರಿನ ಆಧಾರದ ಮೇಲೆ ಎಸ್‌ಐಟಿ ಪೊಲೀಸರು ಇಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ನಿನ್ನೆ ನೋಟಿಸ್ ಜಾರಿ ಮಾಡಿದ್ದರು ಅದರಂತೆ ರಮೇಶ್ ಜಾರಕಿಹೊಳಿ ಇಂದು ಆಡುಗೋಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಆಗಮಿಸಿದ್ದು, ಅವರನ್ನು ಎಸ್‌ಐಟಿ ಪೊಲೀಸರು ವಿಶೇಷ ವಿಚಾರಣಾ ಕೊಠಡಿಯಲ್ಲಿ ವಿಚಾರಣೆಗೆ ಒಳಪಡಿಸಿ ಸಿಡಿ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಹಾಕಿ ಮಾಹಿತಿ ಪಡೆದುಕೊಂಡರು
ಈ ಹಿಂದೆ ಸಹ ಎಸ್‌ಐಟಿ ಅಧಿಕಾರಿಗಳು ರಮೇಶ್ ಜಾರಕಿಹೊಳಿ ಅವರ ಮನೆಗೆ ತೆರಳಿ ಅವರಿಂದ ಸಿಡಿಗೆ ಸಂಬಂಧಿಸಿದಂತೆ ಮಾಹಿತಿಗಳನ್ನು ಕಲೆ ಹಾಕಿದರು ಹಾಕಿದ್ದರು ಇಂದೂ ಸಹ ಮೂರನೇ ಬಾರಿಗೆ ಪೊಲೀಸ್ ಅಧಿಕಾರಿಗಳು ರಮೇಶ್ ಜಾರಕಿಹೊಳಿ ಅವರನ್ನು ವಿಚಾರಣೆಗೆ ಗುರಿಪಡಿಸಿದ್ದಾರೆ ಈ ವಿಚಾರಣೆ ಸಂದರ್ಭದಲ್ಲಿ ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ಸೇರಿದಂತೆ ಅಧಿಕಾರಿಗಳು ಜಾರಕಿಹೊಳಿಯವರಿಗೆ ಯುವತಿಯ ದೂರನ್ನು ಆಧರಿಸಿ ಕೆಲ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡಿದ್ದಾರೆ ಯುವತಿಯ ಪರಿಚಯ ಇದ್ದೇ ಇಲ್ಲವೇ ಪರಿಚಯವಿದ್ದರೆ ಹಾಗೆ ಜೊತೆಗಿನ ಬಾಂಧವ್ಯ ಎಲ್ಲದರ ಬಗ್ಗೆಯೂ ಅಧಿಕಾರಿಗಳು ಜಾರಕಿಹೊಳಿ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.
ಪೊಲೀಸರು ವಿಚಾರಣೆಗೆ ರಮೇಶ್ ಜಾರಕಿಹೊಳಿ ತಮ್ಮ ಆಪ್ತ ಮಾಜಿ ಶಾಸಕ ನಾಗರಾಜ್ ಹಾಗು ವಕೀಲರ ಜೊತೆ ಆಗಮಿಸಿದರು ಅಧಿಕಾರಿಗಳ ಪ್ರಶ್ನೆಗಳಿಗೆ ರಮೇಶ್ ಜಾರಕಿಹೊಳಿ ಸಮಚಿತ್ತದಿಂದ ಉತ್ತರ ನೀಡಿದರು ಎನ್ನಲಾಗಿದೆ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಎರಡು ದಿನಗಳ ಹಿಂದೆಯಷ್ಟೇ ಸಿಡಿ ಯುವತಿಯ ತಂದೆ-ತಾಯಿ ಸಹೋದರನನ್ನು ವಿಚಾರಣೆಗೆ ಒಳಪಡಿಸಿದ್ದರು ಇದಾದನಂತರ ಯುವತಿಯ ಪೋಷಕರು ಮಾಜಿ ಸಚಿವ ಡಿಕೆ ಶಿವಕುಮಾರ್ ಇದಕ್ಕೆಲ್ಲ ಕಾರಣ ಎಂದು ಆರೋಪಿಸಿದ್ದರು ಆಗ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿ ಡಿಕೆ ಶಿವಕುಮಾರ್ ವಿರುದ್ಧ ದೂರು ನೀಡುವುದಾಗಿ ಹೇಳಿ ಅವಾಚ್ಯವಾಗಿ ಮಾತನಾಡಿ ಮಾತನಾಡಿದ್ದು ವಿವಾದಕ್ಕೆ ಕಾರಣವಾಗಿತ್ತು ಡಿಕೆ ಶಿವಕುಮಾರ್ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು ಆದರೂ ರಮೇಶ್ ಜಾರಕಿಹೊಳಿ ಮತ್ತು ಡಿಕೆ ಶಿವಕುಮಾರ್ ಅವರ ವಾಕ್ಸಮರ ಬೆಂಬಲಿಗರ ಪರ-ವಿರೋಧ ಪ್ರತಿಭಟನೆಗಳು ನಡೆದಿದ್ದವು ನಿನ್ನೆ ಡಿಕೆ ಶಿವಕುಮಾರ್ ಬೆಳಗಾವಿ ಸಂದರ್ಭದಲ್ಲಿ ಅವರ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಚಪ್ಪಲಿ ಎಸೆದು ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದರು
ದಿನಕ್ಕೊಂದು ತಿರುವು
ಈ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು ಸಂತ್ರಸ್ತ ಯುವತಿ ಈಗಾಗಲೇ ೫ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದು ಇಂದು ಮುಖ್ಯನ್ಯಾಯಾಧೀಶರಿಗೆ ಪತ್ರ ಬರೆಯುವ ಮೂಲಕ ಸಿಡಿ ಪ್ರಕರಣ ಪರಾಕಾಷ್ಠೆ ತಲುಪಿದೆ
ಸಿಡಿ ಪ್ರಕರಣದ ಯುವತಿಯನ್ನು ಪೊಲೀಸರು ಇನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ ಆಕೆಯ ಪತ್ತೆಕಾರ್ಯ ಮುಂದುವರೆದಿದೆ ಈಕೆಗೂ ವಿಚಾರಣೆಗೆ ಹಾಜರಾಗುವಂತೆ ೫ ನೋಟಿಸ್ಗಳನ್ನೂ ಈಗಾಗಲೇ ಜಾರಿ ಮಾಡಲಾಗಿದೆ
ಇಂದು ಹಾಜರು
ಸಿಡಿ ಸಂತ್ರಸ್ತ ಯುವತಿ ಇಂದು ನ್ಯಾಯಾಲಯಕ್ಕೆ ಹಾಜರಾಗಿ ತನ್ನ ಹೇಳಿಕೆಯನ್ನು ದಾಖಲಿಸುವ ಸಾಧ್ಯತೆಗಳು ಇವೆ ಸಿಡಿ ಯುವತಿ ಪ್ರತ್ಯಕ್ಷರಾದರು ಸಿಡಿ ಪ್ರಕರಣ ಒಂದು ಅಂತಿಮ ಹಂತಕ್ಕೆ ತಲುಪುವ ಸಾಧ್ಯತೆಗಳಿವೆ