ಸಿಡಿ ವಿಚಾರಣೆ ಸುಧಾಕರ್ ಗೈರು

Many CDs on white background

ಬೆಂಗಳೂರು ಏ೫ ಸಿಡಿ ಪ್ರಕರಣದ ವಿಚಾರಣೆಗೆ ಮಾಜಿ ಸಚಿವ ಡಿ ಸುಧಾಕರ್ ಇಂದು ಗೈರು ಹಾಜರಾಗಿದ್ದಾರೆ
ಸಿಡಿ ಯುವತಿಯ ಸಂಪರ್ಕದಲ್ಲಿ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿ.ಸುಧಾಕರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ಜಾರಿ ಮಾಡಿತ್ತು ಆದರೆ ಡಿ ಸುಧಾಕರ್ ವಿಚಾರಣೆಗೆ ಗೈರು ಹಾಜರಾಗಿದ್ದಾರೆ
ಎಸ್‌ಐಟಿ ವಿಚಾರಣೆಗೆ ಗೈರು ಹಾಜರಾಗಿರುವ ಬಗ್ಗೆ ಸ್ಪಷ್ಟನೆ ನೀಡಿರುವ ಮಾಜಿ ಸಚಿವ ಡಿ ಸುಧಾಕರ. ತನ್ನ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದರಿಂದಾಗಿ, ತಾವು ಇಂದು ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದಿದ್ದಾರೆ
ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಅವರು, ಇಂದು ಸಿಡಿ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ನೀಡಿತ್ತು. ಆದರೇ ತನ್ನ ಕ್ಷೇತ್ರದಲ್ಲಿ ಈಗಾಗಲೇ ಈ ಮೊದಲೇ ನಿಗದಿಯಾಗಿದ್ದಂತ ವಿವಿಧ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸೋದು ಇದೆ. ಇದರಿಂದಾಗಿ ಇಂದು ಎಸ್‌ಐಟಿ ಅಧಿಕಾರಿಗಳ ಮುಂದೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಮಾಜಿ ಸಚಿವ ಡಿ.ಸುಧಾಕರ್ ಸಿಡಿ ಸಂತ್ರಸ್ತ ಯುವತಿಯೊಂದಿಗೆ ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದನ್ನ ಎಸ್‌ಐಟಿ ಅಧಿಕಾರಿಗಳು ತನಿಖೆಯಿಂದ ಪತ್ತೆಹಚ್ಚಿದ್ದರು. ಸಂತ್ರಸ್ತ ಯುವತಿಯ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ, ಎಸ್‌ಐಟಿ ಅಧಿಕಾರಿಗಳಿಗೆ ಡಿ.ಸುಧಾಕರ್ ಜೊತೆಗೆ ಸಂಪರ್ಕ ಹೊಂದಿದ್ದ ವಿಚಾರವು ತಿಳಿದು ಬಂದಿತ್ತು. ಹೀಗಾಗಿ ಎಸ್‌ಐಟಿ ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಡಿ.ಸುಧಾಕರ್ ಅವರಿಗೆ ನೋಟಿಸ್ ಜಾರಿಗೊಳಿಸಿತ್ತು. ಇಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಿತ್ತು.