ಸಿದ್ದಗಂಗಾ ಶ್ರೀಗಳ ಸೇವೆ ಅವಿಸ್ಮರಣೀಯ

ತುಮಕೂರು, ಏ. ೩- ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿಯವರ ೧೧೪ನೇ ಜನ್ಮ ದಿನಾಚರಣೆ ಅಂಗವಾಗಿ ಭಕ್ತಿ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ನಡೆದಾಡುವ ದೇವರು ಎನಿಸಿದ್ದ ಸಿದ್ದಗಂಗೆಯ ಡಾ. ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರಕ್ಕೆ ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಪುಷ್ಪಾರ್ಚನೆ ಮಾಡಿದರು.
ನಂತರ ಮಾತನಾಡಿದ ಅವರು, ನಾಡಿನ ಬಡ ಸಮುದಾಯಕ್ಕೆ ವಸತಿ, ಊಟ, ಶಿಕ್ಷಣ ಕಲ್ಪಿಸಿದ ಮಹಾ ತಪಸ್ವಿ. ಅವರ ವಿಚಾರಧಾರೆಗಳು ಹಾಗೂ ಕಾಯಕ ಪ್ರಸಕ್ತ ಸಂದರ್ಭದಲ್ಲಿ ಅನುಕರಣೀಯ ಎಂದರು.
ಸ್ವಾಮೀಜಿಯಾಗಿದ್ದರೂ ಸದಾ ಕಾಲ ತಳ ಸಮುದಾಯದಲ್ಲಿ ಶಿಕ್ಷಣ ಕ್ರಾಂತಿಯನ್ನುಂಟು ಮಾಡಬೇಕೆಂಬ ಹೆಬ್ಬಯಕೆಯನ್ನು ಹೊಂದಿದ್ದರು. ಅವರ ಆಶಯದ ಫಲವಾಗಿ ಇಂದು ಜಿಲ್ಲೆಯಲ್ಲಿ ತಲೆಎತ್ತಿರುವ ಶಿಕ್ಷಣ ಸಂಸ್ಥೆಗಳೆ ಸಾಕ್ಷಿ ಎಂದು ಸ್ವಾಮೀಜಿಯವರ ಸಾಮಾಜಿಕ ಕಳಕಳಿಯನ್ನು ಸ್ಮರಿಸಿದರು
ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಿಇಓ ಡಾ.ಪಿ.ಕೆ. ದೇವದಾಸ್, ಸಾಹೇ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಎಂ.ಝಡ್. ಕುರಿಯನ್, ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಪ್ರಭಾಕರ್ ಮತ್ತಿತರರು ಉಪಸ್ಥಿತರಿದ್ದರು.