ಸಿದ್ದರಾಮಯ್ಯಗೆ ಮುಖ್ಯಮಂತ್ರಿ, ದರ್ಶನಾಪುರಗೆ ಮಂತ್ರಿ ಸ್ಥಾನ ನೀಡಿ

ಶಹಾಪುರ :ಮೇ.17: ಸಿದ್ದರಾಮಯ್ಯ ಅವರನ್ನು ರಾಜ್ಯದ ಮುಖ್ಯಮಂತ್ರಿಯಾಗಿ ಮಾಡಬೇಕು ಮತ್ತು ಮತಕ್ಷೇತ್ರದ ಜನಪ್ರಿಯ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಪಕ್ಷದ ಮುಖಂಡರಾದ ಶಿವಕಾಂತ ರೈಟರ್ ಆಗ್ರಹಿಸಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಮ್ಮ ಕುರುಬ ಸಮುದಾಯದ 14 ಮಂದಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‍ನಿಂದ ಗೆದ್ದಿರುವ 135 ಶಾಸಕರಲ್ಲಿ 110 ಕ್ಕೂ ಹೆಚ್ಚು ಮಂದಿ ಸಿದ್ದರಾಮಯ್ಯನವರ ವರ್ಚಸ್ಸು, ಬೆಂಬಲದಿಂದ ಗೆಲುವು ಸಾಧಿಸಿದ್ದಾರೆ ಹಾಗಾಗಿ, ಅವರೇ ಮುಖ್ಯಮಂತ್ರಿಯಾಗಬೇಕು. ಮತ್ತು ಸರ್ವ ಜನಾಂಗಗಳ ಅಭಿವೃದ್ಧಿಯನ್ನು ಬಯಸುವ ಮತ್ತು ರಾಜ್ಯದಲ್ಲಿ ಶಹಾಪುರ ಮತಕ್ಷೇತ್ರವನ್ನು ಅಭಿವೃದ್ಧಿ ಮಾಡುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ ಕೀರ್ತಿ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಅಪರೂಪದ ಮಾದರಿಯ ಶಾಸಕರು ಈಗಾಗಲೇ ಅವರು ಎರಡು ಬಾರಿ ಸಚಿವ ಸಂಪುಟದಲ್ಲಿ ಸಚಿವರಾಗಿ ಕೆಲಸವನ್ನು ಮಾಡಿದರೆ ಇಂತಹಾ ಅನುಭವ ಇರುವ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಶಿವಕಾಂತ ರೈಟರ್ ಹಾಗೂ ಕುರುಬ ಸಮುದಾಯದ ಅಭಿಮಾನಿಗಳು ದರ್ಶನಾಪುರ ಅಭಿಮಾನಿಗಳು ಒತ್ತಾಯಿಸಿದ್ದಾರೆ.