ಸಿದ್ದರಾಮಯ್ಯಗೆ ಸಿಎಂ, ಈಶ್ವರ ಖಂಡ್ರೆಗೆ ಡಿಸಿಎಂ ಸ್ಥಾನಕ್ಕಾಗಿ ದೇವರಲ್ಲಿ ಪ್ರಾರ್ಥನೆ

ಭಾಲ್ಕಿ:ಮೇ.17: ರಾಜ್ಯದಲ್ಲಿ ಹೊಸದಾಗಿ ರಚನೆ ಆಗುತ್ತಿರುವ ಕಾಂಗ್ರೆಸ್ ಸರಕಾರದಲ್ಲಿ ಕುರುಬ(ಗೊಂಡ) ಸಮುದಾಯದ ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಮತ್ತು ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಮುಖಂಡರು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ತಾಲೂಕಿನ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದ ಮುಖಂಡರಾದ ರಾಜು ಪಾಟೀಲ್, ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಮೇತ್ರೆ, ಎಐಸಿಸಿ ವಿಮೇನ್ಸ್ ರೈಟ್ಸ್ ಜಿಲ್ಲಾಧ್ಯಕ್ಷ ಬಾಲಾಜಿ ಜಬಾಡೆ, ಕೆಪಿಸಿಸಿ ಪ್ರಚಾರ ಸಮಿತಿ ತಾಲೂಕು ಅಧ್ಯಕ್ಷ ರಮೇಶ ಕುಶಪ್ಪನೋರ್, ಮಾರುತಿ ಕುರುಬಖೇಳಗಿ, ಸತೀಶ ತಳವಾಡೆ ಸೇರಿ ಹಲವರು ವಿಶೇಷ ಪೂಜೆ ನೆರವೇರಿಸಿ ಸಿದ್ದರಾಮಯ್ಯ ಮತ್ತು ಈಶ್ವರ ಖಂಡ್ರೆ ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನ ಕಲ್ಪಿಸುವಂತೆ ಪ್ರಾರ್ಥನೆ ಸಲ್ಲಿಸಿದರು.