ಸಿದ್ದರಾಮಯ್ಯಗೆ ಸಿಎಂ ಸ್ಥಾನ ಸ್ವಾಗತಾರ್ಹ

ದಾವಣಗೆರೆ. ಮೇ.೧೮; ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ 3ನೇ ಬಾರಿಗೆ ವಿಧಾನಪರಿಷತ್ ಸದಸ್ಯರಾಗಿರುವ ಸಲೀಂ ಅಹ್ಮದ್‌ ಹಾಗೂ ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರದಿಂದ 4ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿರುವ ಎಸ್.ಎಸ್. ಮಲ್ಲಿಕಾರ್ಜುನ್‌ರವರಿಗೆ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಲು ಕೆಪಿಸಿಸಿ ವಕ್ತಾರರಾದ ಡಿ. ಬಸವರಾಜ್ ಕಾಂಗ್ರೆಸ್ ವರಿಷ್ಠರನ್ನು ಆಗ್ರಹಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಲೀಂ ಅಹ್ಮದ್‌ರವರು ಪ್ರಾಮಾಣಿಕತೆ, ದಕ್ಷತೆಯಿಂದ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುತ್ತಿದ್ದಾರೆ.ಅವರ ಸುಧೀರ್ಘ ಸೇವೆ ಪರಿಗಣಿಸಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರನ್ನಾಗಿ ನೇಮಕ ಮಾಡಲು ಆಗ್ರಹಿಸುತ್ತೇವೆ.4ನೇ ಬಾರಿಗೆ ಶಾಸಕರಾಗಿ ಆಯ್ಕೆ ಆಗಿರುವ ಎಸ್.ಎಸ್. ಮಲ್ಲಿಕಾರ್ಜುನ್‌  ಈ ಹಿಂದೆ 3 ಬಾರಿ ಶಾಸಕರಾಗಿ 2 ಬಾರಿ ಸಚಿವರಾಗಿ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಾಜ್ಯದಲ್ಲೇ ದಾವಣಗೆರೆ ಜಿಲ್ಲೆ ನಂಬರ್ 1 ಜಿಲ್ಲೆಯಾಗಲು ಶ್ರಮಿಸಿದ್ದಾರೆ. ಈಗ ಪುನ: 4ನೇ ಬಾರಿಗೆ ಆಯ್ಕೆ ಆಗಿರುವ ಎಸ್‌ಎಸ್ ಮಲ್ಲಿಕಾರ್ಜುನ್‌ರವರು ಸಚಿವರಾಗಬೇಕು ಎಂದು ಆಗ್ರಹಿಸಿದ್ದಾರೆ.ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ, ಎಐಸಿಸಿ ವರಿಷ್ಠರಾದ ಶ್ರೀಮತಿ ಸೋನಿಯಾಗಾಂಧಿ,  ರಾಹುಲ್‌ಗಾಂಧಿ,  ವೇಣುಗೋಪಾಲ್‌,  ರಣದೀಪ್‌ಸಿಂಗ್ ಸುರ್ಜೆವಾಲ, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನವರನ್ನು ಉಪಮುಖ್ಯಮಂತ್ರಿಯಾಗಿ  ಡಿ.ಕೆ. ಶಿವಕುಮಾರ್‌ರನ್ನು ನೇಮಕ ಮಾಡಿರುವುದು ಸಂತಸ ತಂದಿದೆ ಎಂದರು.ಸುದ್ದಿಗೋಷ್ಠಿಯಲ್ಲಿ‌ ಮಹಮ್ಮದ್ ಜಿಕ್ರಿಯಾ,ಕೆ.ಜಿ.ರಹಮತ್ , ಕೆ.ಎಂ ಮಂಜುನಾಥ್,ಬಿ.ಎನ್ ವಿನಾಯಕ, ಸಂದೇಶ್ ನಾಯ್ಕ್ ಇದ್ದರು.