ಸಿದ್ದರಾಮಯ್ಯನವರ ಅಮೃತ ಮಹೋತ್ಸವದ ಕಾರ್ಯಾಲಯ ಉದ್ಘಾಟನೆ

ದಾವಣಗೆರೆ.ಜು.೨೩; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಅಂಗವಾಗಿ ದಾವಣಗೆರೆ ಶಾಮನೂರು ರಸ್ತೆಯಲ್ಲಿರುವ ಬಾಪೂಜಿ ಅತಿಥಿ ಗೃಹದಲ್ಲಿ ಕಾರ್ಯಾಲಯವನ್ನು ಆರಂಭಿಸಿದ್ದು, ಇಂದು ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಸಮಿತಿಯ ಗೌರವ ಅಧ್ಯಕ್ಷರಾದ ಡಾ.ಶಾಮನೂರು ಶಿವಶಂಕರಪ್ಪನವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಸವರಾಜ ರಾಯರೆಡ್ಡಿ, ಎಸ್.ಎಸ್. ಮಲ್ಲಿಕಾರ್ಜುನ,ಹೆಚ್.ಆಂಜನೇಯ, ಜಮೀರ್ ಅಹ್ಮದ್,ಕೆಪಿಸಿಸಿ ಉಪಾಧ್ಯಕ್ಷರು, ಜಿಲ್ಲಾ ಉಸ್ತುವಾರಿ ಎಂ.ಸಿ.ವೇಣುಗೋಪಾಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಬಿ.ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಮುದೇಗೌಡ್ರು ಗಿರೀಶ್, ಜಿ.ಎಸ್.ಮಂಜುನಾಥ್, ಎ.ನಾಗರಾಜ್, ಕೆ.ಎಸ್.ಬಸವಂತಪ್ಪ, ಅಯೂಬ್ ಪೈಲ್ವಾನ್,ಕವಿತಾರೆಡ್ಡಿ,  ಪಿ.ರಾಜಕುಮಾರ್, ಸಾವನ್ ಮತ್ತಿತರರು ಉಪಸ್ಥಿತರಿದ್ದರು.

Attachments area