ಸಿದ್ದರಾಮಯ್ಯನವರ ಭೇಟಿ ಮಾಡಿದ ಪಾಲಿಕೆ ಸದಸ್ಯರು

(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ ಸೆ 26 : ಇಲ್ಲಿನ  ಮಹಾನಗರ ಪಾಲಿಕೆಗೆ ಹೊಸದಾಗಿ ಚುನಾಯಿತರಾಗಿರುವ ಕಾಂಗ್ರೆಸ್ ಪಕ್ಷದ ಸದಸ್ಯರನ್ನು ನಿನ್ನೆ ಬಳ್ಳಾರಿ ಗ್ರಾಮೀಣ ಶಾಸಕ  ಬಿ.ನಾಗೇಂದ್ರ ಅವರು ವಿರೋಧ ಪಕ್ಷದ ನಾಯಕ  ಸಿದ್ದರಾಮಯ್ಯ ಅವರ ಬಳಿ ಕರೆದೊಯ್ದು   ಭೇಟಿ‌ಮಾಡಿಸಿದರು.
ಈ ಸಂದರ್ಭದಲ್ಲಿ ತಮಿಳುನಾಡು ಹಾಗೂ ಪುದುಚೇರಿಯ ಎಐಸಿಸಿ ಉಸ್ತುವಾರಿ ದಿನೇಶ್ ಗುಂಡೂರಾವ್, ಮಾಜಿ ಸಚಿವ ಸಂತೋಷ್ ಲಾಡ್, ಪಕ್ಷದ ನಗರ ಜಿಲ್ಲಾ ಅಧ್ಯಕ್ಷ ಜಿ.ಎಸ್.ಮಹಮ್ಮದ್ ರಫೀಕ್,
ಹಾಗೂ ಬಳ್ಳಾರಿ ಜಿಲ್ಲೆಯ ಇನ್ನಿತರ ಕಾಂಗ್ರೆಸ್ ಮುಖಂಡರು ಇದ್ದರು.
ಪಾಲಿಕೆಗೆ ಮೇಯರ್ ಉಪ ಮೇಯರ್ ಆಯ್ಕೆ ಕುರಿತಂತೆ ಚರ್ಚಿಸಿದರು.