ಸಿದ್ದರಾಮಯ್ಯ ಅಮೃತ ಮಹೋತ್ಸವ ಸ್ಥಳ ಪರಿಶೀಲಿಸಿದ  ಶಾಮನೂರು ಶಿವಶಂಕರಪ್ಪ

ದಾವಣಗೆರೆ.ಜು.೨೨: ಆಗಸ್ಟ್ 3ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ಜನ್ಮದಿನಾಚರಣೆ ಅಂಗವಾಗಿ ದಾವಣಗೆರೆಯಲ್ಲಿ ಹಮ್ಮಿಕೊಂಡಿರುವ ಅಮೃತ ಮಹೋತ್ಸವ ಸ್ಥಳವಾದ ನಗರದ ಬೈಪಾಸ್ ರಸ್ತೆಯಲ್ಲಿರುವ ಶಾಮನೂರು ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪೂರ್ವ ಸಿದ್ದತೆಯನ್ನು ಶಾಸಕರೂ ಆದ ಅಮೃತ ಮಹೋತ್ಸವ ಸಮಿತಿಯ ಗೌರವ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಅವರು ಪರಿಶೀಲಿಸಿದರು.ಕೆಪಿಸಿಸಿ ಉಪಾಧ್ಯಕ್ಷರು ಹಾಗೂ  ದಾವಣಗೆರೆ ಜಿಲ್ಲಾ ಉಸ್ತುವಾರಿ ಎಂ.ಸಿ.ವೇಣುಗೋಪಾಲ್, ಉದ್ಯಮಿ ಅಥಣಿ ವೀರಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಎಸ್. ಮಲ್ಲಿಕಾರ್ಜುನ, ಪಾಲಿಕೆ ವಿಪಕ್ಷ ನಾಯಕ ಜಿ.ಎಸ್.ಮಂಜುನಾಥ್ ಗಡಿಗುಡಾಳ್, ಸದಸ್ಯ ಎ.ನಾಗರಾಜ್, ಮುಖಂಡರಾದ ಇಟ್ಟಿಗುಡಿ ಮಂಜುನಾಥ್, ಉಮಾಶಂಕರ್ ಅವರು  ಉಪಸ್ಥಿತರಿದ್ದರು.

Attachments area