ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಹತ್ತು ಬಸ್ ಕಾರ್ಯಕರ್ತರು

ನಂಜನಗೂಡು: ಜು.30:- ವಿಧಾನಸಭಾ ಕ್ಷೇತ್ರದಿಂದ ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ 10 ಬಸ್ಸಿನಲ್ಲಿ ಮತ್ತು ಟ್ರೈನಿನಲ್ಲಿ ಹಾಗೂ ತಮ್ಮ ಸ್ವಂತ ಖಾಸಗಿ ವಾಹನಗಳಲ್ಲಿ ಸುಮಾರು ಸಾವಿರಾರು ಕಾರ್ಯಕರ್ತರು ಕಾರ್ಯಕ್ರಮಕ್ಕೆ ಹೋಗುತ್ತೇವೆ ಎಂದು ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು
ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ತಮ್ಮ 75ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಅವರ ಅಮೃತ ಮಹೋತ್ಸವವನ್ನು ದಾವಣಗೆರೆ ಸುಮಾರು 40 ಎಕರೆ ನಗರದ ಪ್ರದೇಶದಲ್ಲಿ ಅದ್ದೂರಿಯಾಗಿ ನಡೆಸುತ್ತಿರುವ ರಿಂದ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಕಾರ್ಯಕರ್ತರು ಮುಖಂಡರುಗಳು ನಗರಸಭೆ ಪುರಸಭೆ ಗ್ರಾಮ ಪಂಚಾಯಿತಿ ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಹಾಲಿ ಸದಸ್ಯರು ಮತ್ತು ಮಾಜಿ ಸದಸ್ಯರು ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸೇರಿದಂತೆ ಪಕ್ಷದ ಬ್ಲಾಕ್ ಅಧ್ಯಕ್ಷರುಗಳು ಉಪಾಧ್ಯಕ್ಷರುಗಳು ಸಂಘಟನಾ ಕಾರ್ಯದರ್ಶಿಗಳು ಮತ್ತು ಪಕ್ಷದ ಕಾರ್ಯಕರ್ತರು ಒಗ್ಗಟ್ಟನಿಂದ ಹೋಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಆದ್ದರಿಂದ ಮೂರನೆಯ ತಾರೀಕು ಬುಧವಾರ ಬೆಳಗ್ಗೆ 11 ಗಂಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಮುಖಂಡರು ನಿಗದಿತ ಸ್ಥಳಕ್ಕೆ ಬಂದು ಕಾರ್ಯಕ್ರಮಕ್ಕೆ ತೆರಳಿ ಯಶಸ್ಸು ಗಳಿಸಬೇಕೆಂದು ಕಾರ್ಯಕರ್ತರಲ್ಲಿ ಮುಖಂಡರಲ್ಲಿ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಲತಾ ಸಿದ್ದ ಶೆಟ್ಟಿ ದೊರೆಸ್ವಾಮಿ ನಾಯಕ ನಗರ ಅಧ್ಯಕ್ಷ ಶಂಕರ್ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಮಾರುತಿ ಶಿವಪ್ಪ ದೇವರು ಇದ್ದರು.