ಸಿದ್ದರಾಮಯ್ಯ ದೀನ, ದಲಿತರ ಹರಿಕಾರ

ಬೆಂಗಳೂರು,ಮೇ೧೮: ತಮ್ಮ ರಾಜಕೀಯ ಜೀವನದುದ್ದಕ್ಕೂ ಸಮಾಜವಾದಿ ಸಿದ್ಧಾಂತವನ್ನು ಅಳವಡಿಸಿಕೊಂಡಿರುವ ಸಿದ್ದರಾಮಯ್ಯ ಶೋಷಿತ, ದೀನದಲಿತರ ಹರಿಕಾರರಾಗಿದ್ದಾರೆ. ಜಾತ್ಯತೀತ ಜನತಾದಳದಲ್ಲಿ ಸಿಎಂ ಸ್ಥಾನದ ವಂಚಿತರಾದ ಅವರು ಪಕ್ಷಕ್ಕೆ ವಿದಾಯ ಹೇಳಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿ ಮುಖ್ಯಮಂತ್ರಿಯಾದರು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಭೂತ ಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿ ಪಟ್ಟ ಅಲಂಕರಿಸುತ್ತಿದ್ದಾರೆ.

ಮೈಸೂರಿನ ವರುಣಾ ಹೋಬಳಿಯ ಸಿದ್ಧರಾಮನಹುಂಡಿಯಲ್ಲಿ ೧೯೪೮ರ ಆಗಸ್ಟ್ ೧೨ ರಂದು ಜನಿಸಿದರು. ಇವರ ತಂದೆ ಸಿದ್ಧರಾಮೇಗೌಡ, ತಾಯಿ-ಬೋರಮ್ಮ. ಇವರದು ತುಂಬು ಮನೆಯ ಅವಿಭಕ್ತ ಕುಟುಂಬ. ಚಿಕ್ಕಂದಿನಲ್ಲೇ ಜಾನಪದ ನೃತ್ಯ ವೀರಗಾಸೆ, ಡೊಳ್ಳು ಕುಣಿತ, ಕಂಸಾಳೆ ನೃತ್ಯಗಳನ್ನು ಕಲಿತಿದ್ದಾರೆ. ಹತ್ತನೇ ವರ್ಷದವರೆಗೆ ಇವರು ಶಾಲೆಗೇ ಹೋಗಿರಲಿಲ್ಲ. ನೇರವಾಗಿ ಐದನೇ ತರಗತಿಗೆ ಶಾಲೆಗೆ ಪ್ರವೇಶ ಪಡೆದು ವಿದ್ಯಾಭ್ಯಾಸ ಮುಂದುವರೆಸಿದರು.
ಪ್ರಾಥಮಿಕ, ಮಾಧ್ಯಮಿಕ, ಪ್ರೌಢಶಾಲೆ ವಿದ್ಯಾಭ್ಯಾಸವನ್ನು ತಮ್ಮ ಹುಟ್ಟೂರಿನಲ್ಲೂ, ಪಿ.ಯು.ಸಿ.ಯನ್ನು ಮೈಸೂರಿನಲ್ಲಿ, ಬಿ.ಎಸ್ಸಿಯನ್ನು ಯುವರಾಜ ಕಾಲೇಜಿನಲ್ಲಿ ಓದಿದರು. ನಂತರ ಮೈಸೂರು ವಿವಿಯಿಂದ ಕಾನೂನು ಪದವಿ ಪಡೆದು, ಚಿಕ್ಕಬೋರಯ್ಯ ಎಂಬ ವಕೀಲರ ಬಳಿ ಜೂನಿ ಯರ್ ಆಗಿ ನಂತರ ೧೯೭೮ರವರೆಗೆ ಸ್ವಂತ-ವಕೀಲಿ ವೃತ್ತಿ ನಡೆಸಿದರು.
ರಾಜಕೀಯ ಜೀವನ
೧೯೮೩ ರ ರಾಜ್ಯ ಚುನಾವಣೆಯಲ್ಲಿ ಭಾರತೀಯ ಲೋಕದಳದಿಂದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದರು. ಭಾರತೀಯ ಲೋಕದಳದಿಂದ ಜನತಾ ಪಕ್ಷಕ್ಕೆ ಸೇರಿದಾಗ, ಇವರನ್ನು ಹೊಸದಾಗಿ ರಚಿಸಿದ ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಗಡಿಭಾಗಗಳಾದ ಕಾಸರಗೋಡು, ಬೆಳಗಾವಿ, ಕೋಲಾರ ಮುಂತಾದೆಡೆ ಪ್ರವಾಸ ಕೈಗೊಂಡು ವರದಿ ಸಲ್ಲಿಸಿದರು.
೧೯೮೫ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲುವು. , ಪಶುಸಂಗೋಪನೆ ಸಚಿವರನ್ನಾಗಿ ನೇಮಕ. . ಸಂಪುಟ ಪುನರ್‌ರಚನೆಯ ನಂತರ ರೇಷ್ಮೆ ಮತ್ತು ಸಾರಿಗೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದರು.
೧೯೮೯ ರ ಕಾಂಗ್ರೆಸ್ ಅಲೆಯಲ್ಲಿ ಚುನಾವಣೆ ಸೋತ ಸಿದ್ಧರಾಮಯ್ಯ, ಜನತಾ ಪಕ್ಷ ಹೋಳಾದಾಗ ಜನತಾದಳ ಸೇರಿದರು. ೧೯೯೨ರಲ್ಲಿ ದೇವೇಗೌಡರು ಸಮಾಜವಾದಿ ಜನತಾ ಪಕ್ಷದಿಂದ ಜನತಾದಳ ಸೇರಿದಾಗ, ಜನತಾದಳದ ಕಾರ್ಯದರ್ಶಿಯಾದರು.
೧೯೯೪ ರ ಚುನಾವನಣೆಯಲ್ಲಿ ಗೆದ್ದು ಹಣಕಾಸು ಸಚಿವರಾದರು.
೧೯೯೯ ರ ಚುನಾವಣೆಯ ಹೊತ್ತಿಗೆ ಜನತಾ ದಳ ೨ ಭಾಗವಾದಾಗ, ದೇವೇಗೌಡರೊಂದಿಗೆ ಸೇರಿ ಜಾತ್ಯತೀತ ಜನತಾದಳ ಪಕ್ಷದ ಅಧ್ಯಕ್ಷರಾದರು.
೧೯೯೯ ಚುನಾವಣೆಯಲ್ಲಿ ಸೋಲು .
೨೦೦೪ರ ಹೊತ್ತಿಗೆ ಜಾತ್ಯತೀತ ಜನತಾದಳದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿತರಾದರು.
೨೦೦೪ರಲ್ಲಿ ಅತಂತ್ರ ವಿಧಾನಸಭೆ ರಚನೆಯಾದಾಗ, ಕಾಂಗ್ರೆಸ್ ಜತೆಗೂಡಿ ಸರ್ಕಾರ ರಚನೆಯಾದಾಗ ೨ ಬಾರಿ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾದರು,
೨೦೦೬ರ ಡಿಸೆಂಬರ್ ಉಪಚುನಾವಣೆಯಲ್ಲಿ ಸ್ಪರ್ಧಿಸಿದರು.
೨೦೦೮ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು.
೨೦೧೩ರ ಚುನಾವಣೆಯ ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ.
ಮೇ ೧೦ ೨೦೧೩ ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ, ಮೇ ೧೩ ೨೦೧೪ರಂದು ಕರ್ನಾಟಕದ ೨೨ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. (೧೩ ಮೇ ೨೦೧೩)
ಮುಖ್ಯಮಂತ್ರಿಯಾಗಿ ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯಗಳಂತಹ ಯೋಜನೆಗಳನ್ನು ಮಾಡಿದರು ಮತ್ತು ದಲಿತವರ್ಗಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸನ್ನು ನೀಡಿದ್ದರು.
೧೨-೦೫-೨೦೧೮ ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಅವುಗಳಲ್ಲಿ ಚಾಮುಂಡೇಶ್ವರಿಯಲ್ಲಿ ಸೋತು, ಬಾದಾಮಿಯಲ್ಲಿ ಕಡಿಮೆ ಮತಗಳ ಅಂತರದಲ್ಲಿ ಗೆದ್ದಿದ್ದರು
ಈಗ ಗುರುವಾರ ಅಂದರೆ ೧೮ ನೇ ೨೦೨೩ ರಂದು ಎರಡನೇ ಬಾರಿಗೆ ನೂತನ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದಾರೆ.