ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ: ಕುರುಬ ಸಮಾಜದಿಂದ ವಿಶೇಷ ಪೂಜೆ

ದಾವಣಗೆರೆ.ಮೇ.೧೫: ರಾಜ್ಯದ 16ನೇ ವಿಧಾನಸಭೆಯ ಮುಖ್ಯಮಂತ್ರಿಯನ್ನಾಗಿ  ಸರ್ವ ಸಮಾಜದ ವ್ಯಕ್ತಿ ಆಗಿರುವ ಸಿದ್ದರಾಮಯ್ಯ ಅವರನ್ನೇ ಆಯ್ಕೆ ಮಾಡುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ಕುರುಬರ ಸಮಾಜ ದಾವಣಗೆರೆಯ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ಕುರುಬ ಸಮಾಜದ ಅಧ್ಯಕ್ಷ ವೀರಣ್ಣ, ಎಲ್ಲಾ ಸಮಾಜಕ್ಕೆ ಬೇಕಾಗುವ ವ್ಯಕ್ತಿ ಸಿದ್ದರಾಮಯ್ಯ. ರಾಜ್ಯದಲ್ಲಿ ಎಲ್ಲಾ ಸಮಾಜದವರನ್ನು ತನ್ನ ಜೊತೆಗೆ ಕೊಂಡೊಯ್ದು ಸಮ‌ ಸಮಾಜವನ್ನು ನಿರ್ಮಾಣ ಮಾಡಿದ ವ್ಯಕ್ತಿತ್ವ ಅವರದು. ಅಲ್ಲದೇ 13 ಬಾರಿ ಬಜೆಟ್ ಮಂಡನೆ ಮಾಡಿರುವ ಹೆಗ್ಗಳಿಕೆ ಅವರದು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಆಯ್ಕೆ ಸಂದರ್ಭದಲ್ಲಿ ಕಾಂಗ್ರೆಸ್‌ನ ವರಿಷ್ಠರು ಬೇರೆ ಯಾವುದೇ ಒಂದು ಜಾತಿಗೆ ಸೀಮಿತ ಆಗುವ ವ್ಯಕ್ತಿಗೆ ಮುಖ್ಯಮಂತ್ರಿ ಸ್ಥಾನ ನೀಡದೆ ಎಲ್ಲಾ ಸಮಾಜದ ವ್ಯಕ್ತಿಯಾಗಿರುವ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಬೇಕಾಗಿದೆ. ಆ ಮೂಲಕ ಎಲ್ಲಾ ಸಮಾಜದ ಏಳಿಗೆಗೆ ಶ್ರಮಿಸಬೇಕು ಎಂದು ಕರೆ ನೀಡಿದರು. ಮಾಜಿ ಮೇಯರ್ ಹಾಗೂ ಕಾಂಗ್ರೆಸ್ ಮುಖಂಡ ಎಚ್. ಬಿ. ಗೋಣೆಪ್ಪ ಮಾತನಾಡಿ,‌ ಕಾಂಗ್ರೆಸ್ ಪ್ರಣಾಳಿಕೆಯಲ್ಲಿರುವ ಎಲ್ಲಾ ಭರವಸೆಗಳನ್ನು ಈಡೇರಿಸುವ ಶಕ್ತಿ  ಇರುವುದು ಕೇವಲ ಸಿದ್ದರಾಮಯ್ಯ ಅವರಿಗೆ ಮಾತ್ರ.  ಅಲ್ಲದೆ 13 ಬಾರಿ ರಾಜ್ಯದ ಆಯವ್ಯಯವನ್ನು ಮಂಡಿಸಿರುವ ಹೆಗ್ಗಳಿಕೆ ಅವರಿಗಿದೆ. ಅಲ್ಲದೆ ದೇಶದಲ್ಲಿ 13 ಬಾರಿ ಬಜೆಟ್ ಮಂಡನೆ ಮಾಡಿರುವ ಏಕೈಕ ವ್ಯಕ್ತಿ ಎಂದರೆ ಸಿದ್ದರಾಮಯ್ಯ‌ ಕಾರಣ ಅವರಿಗೆ ಆಡಳಿತ ಕೊಟ್ಟರೆ ರಾಜ್ಯವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲಿದ್ದಾರೆ ಎಂದು ಹೇಳಿದರು.ಕುರುಬ ಸಮಾಜದ ಮುಖಂಡ ಹಾಗೂ ನಗರ ದೇವತೆ ದುರ್ಗಾಂಬಿಕ ದೇವಸ್ಥಾನದ ಟ್ರಸ್ಟಿ ಗೌಡ್ರ ಚೆನ್ನಬಸಪ್ಪ ಮಾತನಾಡಿ, ದೇವರಾಜ ಅರಸು ನಂತರ ಎಲ್ಲಾ ಸಮಾಜಕ್ಕೆ ಸಮಾನತೆ ನೀಡಿದ ಹಾಗೂ ಸಮಾನ ಅಭಿವೃದ್ಧಿ ಕಲ್ಪಿಸಿದ ವ್ಯಕ್ತಿ ಅಂದರೆ ಅದು ಸಿದ್ದರಾಮಯ್ಯ ಮಾತ್ರ.‌ ಅಹಿಂದ ವರ್ಗದ ಪ್ರತಿಯೊಂದು ಸಮಾಜಗಳನ್ನು ತನ್ನ ಜೊತೆಗೆ ಕೊಂಡೊಯ್ಯುವ ಮೂಲಕ ಎಲ್ಲಾ ವರ್ಗಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಇದೀಗ ವಿಧಾನಸಭೆಗೆ ಮುಖ್ಯಮಂತ್ರಿ ಆಯ್ಕೆ‌ ಪ್ರಕ್ರಿಯೆ ನಡೆದಿದ್ದು, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರಸ್ ಪಕ್ಷದ ವರುಷದ ಯಾವುದೇ ಕಾರಣಕ್ಕೂ ಒಂದು ಸಮಾಜಕ್ಕೆ ಸೀಮಿತವಾದ ವ್ಯಕ್ತಿಯನ್ನು ಆಯ್ಕೆ ಮಾಡದೆ ಸರ್ವ ಸಮಾಜಕ್ಕೆ ಸಲುವ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಮನವಿ ಮಾಡಿದರು.

 ಈ ವೇಳೆ ಕುರುಬ ಸಮಾಜದ ಮುಖಂಡರು ಇದ್ದರು.