ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಳಪ್ಪ ಪೂಜಾರಿ ಹರ್ಷ

ಯಾದಗಿರ:ಮೇ.19:ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸನ್ಮಾನ್ಯ ಸಿದ್ದರಾಮಯ್ಯನವರು ಆಯ್ಕೆ ಯಾಗಿರುವುದಕ್ಕೆ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ಮಾಳಪ್ಪ ಪೂಜಾರಿ ಹೆಗ್ಗನದೊಡ್ಡಿ ಹರ್ಷ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಲಭಿಸಿ ವಲ್ಲಿ ಪ್ರಮುಖ ಪಾತ್ರವಹಿಸಿ ಹೆಚ್ಚಿನ ಸ್ಥಾನ ಗೆಲ್ಲಿಸಿದ್ದಾರೆ ಅದನ್ನು ಮನಗಂಡು ಕಾಂಗ್ರೆಸ್ ಪಕ್ಷದ ವರಿಷ್ಠರು ಹಾಗೂ ಹಿರಿಯ ನಾಯಕರು ಮುಖ್ಯಮಂತ್ರಿ ಸ್ಥಾನ ನೀಡಿರುವುದು ನಮ್ಮೆಲ್ಲರಿಗೂ ಸಂತಸ ತಂದಿದೆ ಮುಂದಿನ ದಿನಗಳಲ್ಲಿ ಅವರು ರಾಜ್ಯದ ಎಲ್ಲಾ ವರ್ಗದ ಜನಾಂಗದವರ ಏಳಿಗೆಗಾಗಿ ಹಗಲಿರಳು ಶ್ರಮ ವಹಿಸುತ್ತಾರೆ ಅವರು ಕೊಟ್ಟಂತ ಗ್ಯಾರಂಟಿಗಳನ್ನು ಈಡೇರಿಸುವುದರ ಜೊತೆಗೆ ಸರ್ವ ಜನರ ಅಭಿವೃದ್ಧಿಯನ್ನು ಬಯಸುವಂಥ ಮಹಾನ್ ನಾಯಕರು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಲ ತುಂಬುವುದರ ಜೊತೆಗೆ ಜಿಲ್ಲಾ ಪಂಚಾಯತ್ ತಾಲೂಕ್ ಪಂಚಾಯತ್ ಲೋಕಸಭಾ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡುವುದೇ ಅವರ ಗುರಿ ಅವರು ಮುಖ್ಯಮಂತ್ರಿ ಆಗಬೇಕೆಂದು ಎಲ್ಲಾ ಜಾತಿ ಜನಾಂಗದವರ ಬೇಡಿಕೆ ಆಗಿತ್ತು ಎಲ್ಲಾರಾ ಆಸೆ ಈಡೇರಿದೆ ಎಂದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ಮಾಳಪ್ಪ ಪೂಜಾರಿ ಹೆಗ್ಗನದೊಡ್ಡಿ
ಪತ್ರಿಕಾ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.