ಸಿದ್ದರಾಮಯ್ಯ ವಿರುದ್ಧ ಅವಹೇಳನ ಹೆಗೆಡೆ ಬಂಧನಕ್ಕೆ ಪ್ರತಿಭಟನೆ

ರಾಯಚೂರು, ಜ.೧೬-ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನವಾಗಿ ಮಾತನಾಡಿರುವ ಸಂಸದ ಅನಂತಕುಮಾರ ಹೆಗಡೆ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಪ್ರತಿಭಟನೆ ನಡೆಸಲಾಯಿತು.
ಶೆಫರ್ಡ್ ಇಂಡಿಯಾ ಇಂಟರ್‌ನ್ಯಾಷ್‌ನಲ್ ಜಿಲ್ಲಾ ಘಟಕ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಅಣಕು ಶವಯಾತ್ರೆ ಮಾಡಿ ಸಂಸದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡಿರುವ ಹೆಗೆಡೆ ಅವರನ್ನು ಬಂಧನ ಮಾಡುವಂತೆ ಆಗ್ರಹಿಸಿದರು. ಹೆಗಡೆ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಲಾಗಿತ್ತು. ಹೆಗೆಡೆ ವಿರುದ್ಧ ದಿಕ್ಕಾರ ಕೂಗಿದರು.
ಕೊನೆಯಲ್ಲಿ ಅನಂತಕುಮಾರ್ ಹೆಗಡೆ ಅವರ ಪ್ಲೆಕ್ಸ್‌ಗೆ ಚಪ್ಪಲಿ ಎಸೆದು ಧಿಕ್ಕಾರ ಕೂಗಲಾಯಿತು.
ಪ್ರತಿಭಟನೆಕಾರರು ಮಾತನಾಡಿ,ಅನಂತಕುಮಾರ್ ಹೆಗಡೆ ಬಹುವಚನದಲ್ಲಿ ಮಾತನಾಡಲು ಯೋಗ್ಯವಲ್ಲದ ವ್ಯಕ್ತಿ. ಮತ್ತೊಂದು ಭಾರಿ ಸಿದ್ದರಾಮಯ್ಯ ವಿರುದ್ಧ ಅವಹೇಳನ ಹೇಳಿಕೆ ನೀಡಿದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಮುಖ್ಯಮಂತ್ರಿ ವಿರುದ್ಧ ಮಾತನಾಡಿ, ಸಮಾಜದಲ್ಲಿ ಅಶಾಂತಿ ಉಂಟುಮಾಡಲು ಯತ್ನಿಸುತ್ತಿರುವ ಅನಂತಕುಮಾರ್ ಹೆಗಡೆ ಅವರು ಮುಖ್ಯಮಂತ್ರಿ ಅವರ ಬಹಿರಂಗ ಕ್ಷಮೆ ಕೇಳಬೇಕು. ಮತ್ತು ತಕ್ಷಣವೇ ಬಂಧನ ಮಾಡುವಂತೆ ಒತ್ತಾಯಿಸಿದರು.