ಸಿದ್ದರಾಮಯ್ಯ ಸರ್ಕಾರ ನಾಡಿನ ಒಳಿತಿಗಾಗಿ ಕೆಲಸ ಮಾಡಲಿ

ಬೀದರ್ ಮೇ.21: ನೂತನವಾಗಿ ರಚನೆಯಾದ ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರ ನಾಡಿನ ಒಳಿತಿಗಾಗಿ ನಾಡಿನ ರೈತರ, ಬಡವರ, ಶ್ರಮಿಕರ, ದಿನದಲಿತರ ಪರವಾಗಿ ಕೆಲಸ ಮಾಡುವ ಸರ್ಕಾರವಾಗಲಿ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಖಾಶೆಂಪುರ್ ಶುಭ ಹಾರೈಸಿದ್ದಾರೆ.
ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಮತ್ತು ತಮ್ಮ ಜೀವನದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯರವರಿಗೆ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್ ರವರಿಗೆ ಹಾಗೂ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರಿಗೆ ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪುರ್ ರವರು ಸಾಮಾಜಿಕ ಜಾಲತಾಣಗಳ ಮೂಲಕ ಅಭಿನಂದನೆ ತಿಳಿಸಿದ್ದಾರೆ.
“ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯರವರಿಗೆ ಮತ್ತು ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸನ್ಮಾನ್ಯ ಶ್ರೀ ಡಿ.ಕೆ ಶಿವಕುಮಾರ್ ರವರಿಗೆ ಹಾಗೂ ಅವರೊಂದಿಗೆ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸರ್ವರಿಗೂ ಅಭಿನಂದನೆಗಳು.”
“ನೂತನವಾಗಿ ರಚನೆಯಾದ ಸರ್ಕಾರ ನಾಡಿನ ಒಳಿತಿಗಾಗಿ ನಾಡಿನ ರೈತರ, ಬಡವರ, ಶ್ರಮಿಕರ, ದಿನದಲಿತರ ಪರವಾಗಿ ಕೆಲಸ ಮಾಡುವ ಸರ್ಕಾರವಾಗಲಿ. ನಾಡಿನ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನವನ್ನು ಸನ್ಮಾನ್ಯ ಶ್ರೀ ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರ ಮಾಡಲಿ ಎಂದು ಈ ಮೂಲಕ ಶುಭ ಹಾರೈಸುತ್ತೇನೆ. ನೂತನ ಸರ್ಕಾರದ ಸರ್ವರಿಗೂ ಅಭಿನಂದನೆಗಳು.” ಎಂದು ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪುರ್ ರವರು ಫೇಸ್‍ಬುಕ್, ಇನ್ಸ್ಟಾಗ್ರಾಮ್, ಟ್ವಿಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಬರೆದುಕೊಂಡಿದ್ದಾರೆ.