ಸಿದ್ದರಾಮೋತ್ಸವಕ್ಕೂ ನಮಗೂ ಸಂಬಂಧವಿಲ್ಲ: ಹೆಚ್.ಡಿ ರೇವಣ್ಣ

ಮೈಸೂರು,ಜು.15:- ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ಆಷಾಢ ಮಾಸದ ಮೂರನೇ ಶುಕ್ರವಾರ ಪ್ರಯುಕ್ತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನಾಡಿನ ಜನತೆಗೆ ಒಳಿತಾಗುವಂತೆ ಪ್ರಾರ್ಥಿಸಿದ್ದೇನೆ. ಉತ್ತಮ ಮಳೆಯಾಗಿದ್ದು ನಾಡು ಸಮೃದ್ಧಿಯಾಗಲೆಂದು ಬೇಡಿಕೊಂಡಿದ್ದೇನೆ. ರಾಜ್ಯದ, ರಾಷ್ಟ್ರದ ಜನರು ಚೆನ್ನಾಗಿರಬೇಕು. ರಾಜ್ಯದ ಜನತೆಗೆ ಆರೋಗ್ಯ ಕೊಟ್ಟು ಅವರು ಚೆನ್ನಾಗಿರುವಂತೆ ನೋಡಿಕೊಳ್ಳುವಂತೆ ತಾಯಿಯಲ್ಲಿ ಪ್ರಾರ್ಥಿಸಿದ್ದಾಗಿ ತಿಳಿಸಿದರು.
ಶಾಲಾ ಮಕ್ಕಳಿಗೆ ಮೊಟ್ಟೆ ಕೊಡದಂತೆ ಎನ್ ಇಪಿ ಸಮಿತಿ ಶಿಫಾರಸು ಮಾಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿ ರಾಜ್ಯ ಸರ್ಕಾರ ಮಕ್ಕಳಿಗೆ ಮೂಲಭೂತ ಸೌಲಭ್ಯಗಳನ್ನು ಕೊಡುತ್ತಿಲ್ಲ. ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಶೂ, ಸಾಕ್ಸ್, ಮೊಟ್ಟೆ ಎಲ್ಲವನ್ನೂ ಕೊಡಲು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದರು.
ಸಿದ್ಧರಾಮೋತ್ಸವ ಕುರಿತು ಪ್ರತಿಕ್ರಿಯಿಸಿ ಸಿದ್ದರಾಮೋತ್ಸವಕ್ಕೂ ನಮಗೂ ಸಂಬಂಧವಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ನವರು ನಮಗೂ ಅದಕ್ಕೂ ಸಂಭಂದವಿಲ್ಲ ಎಂದರು.