ಸಿದ್ದು,ಅಖಂಡ ಭೇಟಿ ಚರ್ಚೆ

ಬೆಂಗಳೂರು,ಏ.೨- ವಿಧಾನಸಭೆ ಚುನಾವಣೆಗೆ ದಿನಾಂಕ ನಿಗಧಿ ಆಗಿರುವ ಹಿನ್ನೆಲೆಯಲ್ಲಿ ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಟಿಕೆಟ್ ಸಂಬಂಧ ಚರ್ಚೆ ನಡೆಸಿದರು.
ಸರ್ಕಾರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಅಖಂಡ ಶ್ರೀನಿವಾಸ ಮೂರ್ತಿ ಅವರು ಪುಲಿಕೇಶಿ ನಗರದಿಂದ ಟಿಕೆಟ್ ತಮಗೆ ಕೊಡಬೇಕೆಂದು ಮನವಿ ಮಾಡಿದರು. ವಿಧಾನ ಸಭೆ ಚುನಾವಣೆ ಹಿನ್ನೆಲೆ ಮೊದಲ ಕಾಂಗ್ರೆಸ್ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡದೇ ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಕುತೂಹಲ ಹೆಚ್ಚು ಮಾಡಿದೆ.
ಕಾಂಗ್ರೆಸ್‌ನ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಪ್ರಕಟಿಸುವಂತೆ ಹೈಕಮಾಂಡ್‌ಗೆ ಶಿಫಾರಸ್ಸು ಮಾಡಿ ಎಂದು ಮನವಿ ಮಾಡಿದ್ದಾರೆ. ಈ ಕ್ಷೇತ್ರದಿಂದ ಮಾಜಿ ಶಾಸಕ ಪ್ರಸನ್ನ ಕುಮಾರ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಖಂಡ ಶ್ರೀನಿವಾಸ ಮೂರ್ತಿ ಸಿದ್ದರಾಮಯ್ಯ ಅವರನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ಸಿನಿಂದ ಯಾರಿಗೆಲ್ಲ ಚುನಾವಣಾ ಟಿಕೆಟ್ ನೀಡುತ್ತದೆ ಅನ್ನುವುದನ್ನು ಕಾದು ನೋಡಬೇಕಾಗಿದೆ.