ಸಿದ್ದು, ಡಿಕೆಶಿ ಪ್ರಮಾಣ ವಚನ: ಘಟಾನುಘಟಿ ನಾಯಕರಿಗೆ ಆಹ್ವಾನ

ಬೆಂಗಳೂರು, ಮೇ.18- ನಾಡಿದ್ದು ಶುಕ್ರವಾರ ನೂತನ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಸಿದ್ದರಾಮಯ್ಯ ಹಾಗೂ ಉಪಮುಖ್ಯ ಮಂತ್ರಿಯಾಗಿ ಡಿ.ಕೆ.ಶಿವಕುಮಾರ್
ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಚಂಡಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ದಗೊಂಡಿದೆ.
ಘಟಾನುಘಟಿ ನಾಯಕರು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಎನ್ ಸಿಪಿ ನಾಯಕ ಶರದ್ ಪವಾರ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ , ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಅವರನ್ನು ಆಹ್ವಾನಿಸಲಾಗಿದೆ.


ಸಮಾಜವಾದಿ ಪಕ್ಷದ ಧುರೀಣ ಅಖಿಲೇಶ್ ಯಾದವ್, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಸಿಪಿಐ ಮುಖಂಡ ಸೀತಾರಾಂ ಯೆಚೂರಿ , ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಕರ ರಾವ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ,
ವಿವಿಧ ರಾಜ್ಯಗಳಲ್ಲಿನ ವಿರೋಧ ಪಕ್ಷದ ನಾಯಕರಿಗೆ ಆಹ್ವಾನ ನೀಡುವ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸೋಲಿಸಲು ವಿರೋಧ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಮೈತ್ರಿಗೆ ಮುಂದಾಗಿದೆ. ಇದೇ ನೆಪದಲ್ಲಿ ಸಿದ್ದರಾಮಯ್ಯ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಾಲಿಗೆ ಬಲ ಪ್ರದರ್ಶನದ ವೇದಿಕೆಯಾಗಲಿದೆ.