ಸಿದ್ದು ಪ್ರಕರಣಕ್ಕೆ ಸುಪ್ರೀಂ ತಡೆ

ನವದೆಹಲಿ,ಫೆ.೧೯- ದೇಶದಲ್ಲಿ ರಾಜಕಾರಣಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಕಾನೂನು ಬದ್ಧತೆಯ ಬಗ್ಗೆ ತಗಾದೆ ತೆಗೆದಿರುವ ಸುಪ್ರೀಂ ಕೋರ್ಟ್, ಜನ ಸಾಮಾನ್ಯರಿಗೆ ತೊಂದರೆ ಕೊಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ತಡೆ ನೀಡಿದೆ.ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರ ವಿರುದ್ದ ಪ್ರತಿಭಟನೆಗೆ ಸಂಬಂಧಿಸಿದಂತೆ ದಾಖಲಾಗಿದ್ದು ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.ಬೆಂಗಳೂರಿನಲ್ಲಿ ೨೦೨೨ರಲ್ಲಿ ಅಂದಿನ ಗ್ರಾಮೀಣಾಭಿದ್ದಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ರಾಜೀನಾಮಗೆ ಆಗ್ರಹಿಸಿ ನಡೆಸಿದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಈ ವಿಷಯ ತಿಳಿಸಿದೆ.

ಪ್ರತಿವಾದಿಗಳಿಗೆ ನೋಟೀಸ್:.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರೆ ಕಾಂಗ್ರೆಸ್ ನಾಯಕರ ವಿರುದ್ಧ ಕರ್ನಾಟಕ ಹೈಕೋರ್ಟ್ ನಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ತಡೆ ನೀಡಿದ್ದು ಸಿದ್ದರಾಮಯ್ಯ ತುಸು ನೆಮ್ಮದಿ ನಿಟ್ಟಿಸಿರು ಬಿಡುವಂತಾಗಿದೆ.ಪ್ರತಿಭಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಪಿ ಕೆ ಮಿಶ್ರಾ ಅವರನ್ನೊಳಗೊಂಡ ಪೀಠ,ಕರ್ನಾಟಕ ಸರ್ಕಾರ ಮತ್ತು ಪ್ರಕರಣದ ದೂರುದಾರರಿಗೆ ನೋಟಿಸ್ ಜಾರಿ ಮಾಡಿದೆಪ್ರತಿಭಟನೆಯ ಸುತ್ತಲಿನ ಕಾನೂನು ಅಂಶಗಳನ್ನು ಎಚ್ಚರಿಕೆಯಿಂದ ಪರಿಶೀಲಿಸುವ ಸಂಕೇತವಾಗಿದೆ ಎಂದು ಹೇಳಿದೆ.ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಅವರು, “ಸಾಮಾನ್ಯ ನಾಗರಿಕರೊಬ್ಬರು ಇದೇ ರೀತಿಯ ಪ್ರತಿಭಟನೆ ನಡೆಸಿದರೆ ಏನು ಎಂದು ಪ್ರಶ್ನಿಸಿದ್ದು ಆ ಸನ್ನಿವೇಶದಲ್ಲಿ ಕ್ರಿಮಿನಲ್ ಪ್ರಕರಣವನ್ನು ವಜಾಗೊಳಿಸಬಹುದೇ ರಾಜಕಾರಣಿಗಳು ಭಾಗಿಯಾಗಿರುವ ನಿರ್ಧಾರಗಳನ್ನು ನ್ಯಾಯಾಲಯ ಉಲ್ಲೇಖಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಕರಣ ಏನು;

೨೦೨೨ ರಲ್ಲಿ ಅಂದಿನ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ರಾಜೀನಾಮೆಗೆ ಆಗ್ರಹ ಆಗ ವಿರೋಧ ಪಕ್ಷದ ನಾಯಕ ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರು ಮೆರವಣಿಗೆ ನಡೆಸಿದ್ಸರು.. ಸಾರ್ವಜನಿಕ ಕಾಮಗಾರಿ ಗುತ್ತಿಗೆಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಈಶ್ವರಪ್ಪ ರಾಜೀನಾಮೆಗೆ ಪ್ರತಿಭಟನೌಕರರು ಒತ್ತಾಯಿಸಿದರು,ಕರ್ನಾಟಕ ಹೈಕೋರ್ಟ್ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರಿಗೆ ತಲಾ ೧೦,೦೦೦ ದಂಡ ವಿಧಿಸಿದ ನಂತರ. ಹೆಚ್ಚುವರಿಯಾಗಿ, ಮಾರ್ಚ್ ೬ ರಂದು ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಹೈಕೋರ್ಟ್ ಅವರಿಗೆ ಸೂಚಿಸಿತ್ತು, ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತು ಇತರರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ ಅರ್ಜಿ ವಜಾಗೊಳಿಸಿತ್ತು. ಇದೇ ಫೆಬ್ರವರಿ ೬ರಂದು ಸಿದ್ದರಾಮಯ್ಯ ಸೇರಿ ನಾಲ್ವರಿಗೂ ತಲಾ ೧೦ ಸಾವಿರ ರೂ. ದಂಡ ವಿಧಿಸಿತ್ತು. ಆದರೆ, ಪ್ರಕರಣವನ್ನು ರದ್ದುಗೊಳಿಸಲು ಉಚ್ಛ ನ್ಯಾಯಾಲಯ ನಿರಾಕರಿಸಿತ್ತು. ಜತೆಗೆ, ಮಾರ್ಚ್ ೬ರಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್?ಗೆ ಹಾಜರಾಗಲು ಮುಖ್ಯಮಂತ್ರಿ ಅವರಿಗೆ ನ್ಯಾಯಪೀಠ ಸೂಚನೆ ನೀಡಿತ್ತು. ಹೀಗಾಗಿ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಯ ಸಿಂಧುತ್ವವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.ಆಪಾದಿತ ಅಪರಾಧ ಯಾವುದೇ ಮಹತ್ವದ ಅಂಶವನ್ನು ಹೊಂದಿಲ್ಲ. ಪ್ರಸ್ತುತ ಪ್ರಕ್ರಿಯೆಯು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿದೆ. ಅಸ್ಪಷ್ಟ ಆರೋಪಗಳ ಆಧಾರದ ಮೇಲೆ ಪ್ರಕ್ರಿಯೆಗಳನ್ನು ಮುಂದುವರಿಸುವುದು ಅನಗತ್ಯ ಕಿರುಕುಳಕ್ಕೆ ಕಾರಣವಾಗುತ್ತದೆ. ಅಂದಿನ ಘಟನೆಯು ಸುಮಾರು ಕೇವಲ ಒಂದು ಗಂಟೆಗಳ ಕಾಲ ನಡೆದಿದೆ. ಮೆರವಣಿಗೆಯ ಯಾವುದೇ ಸದಸ್ಯರ ವಿರುದ್ಧ ಯಾವುದೇ ಹಿಂಸಾತ್ಮಕ ಕ್ರಮ ಅಥವಾ ಕ್ರಿಮಿನಲ್ ಬಲದ ಬಳಕೆಯ ಆಪಾದನೆ ಇಲ್ಲ. ಕಮಿಷನ್ ಆರೋಪದ ಸಂಬಂಧ ಗುತ್ತಿಗೆದಾರರ ಸಾವಿನ ಕುರಿತು ಅಂದಿನ ಸಚಿವ ಕೆ.ಎಸ್.ಈಶ್ವರಪ್ಪನವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದರು.