
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡುತ್ತಿದ್ದಂತೆಯೇ ನಗರದ ಸಿದ್ದರಾಮಯ್ಯ ನಿವಾಸದ ಮುಂದೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸಿದರು.
ಬೆಂಗಳೂರು,ಮೇ.೧೮- ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಅವರ ನಿವಾಸದ ಮುಂದೆ ಸಂಭ್ರಮ ಮನೆ ಮಾಡಿದೆ.
ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಮೇ.೨೦ರಂದು ಮಧ್ಯಾಹ್ನ ೧೨.೩೦ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನಾಡಿನ ವಿವಿಧ ಮೂಲಗಳಿಂದ ಆಗಮಿಸುತ್ತಿರುವ ಅಭಿಮಾನಿಗಳು ಸಿದ್ಧರಾಮಯ್ಯ ಅವರ ಮನೆ ಮುಂದೆ ಜಮಾಯಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಸ್ಥಾನ ಸಿಗುತ್ತಿರುವ ಹಿನ್ನೆಲೆ ‘ಸಿದ್ದರಾಮಯ್ಯ ಸರ್ಕಾರಿ ನಿವಾಸದ ಬಳಿ ಪಟಾಕಿ ಸಿಡಿಸಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಬೆಳಗ್ಗೆಯಯೇ ಸಿದ್ದರಾಮಯ್ಯ ನಿವಾಸದತ್ತ ಆಗಮಿಸಿದ ಅಭಿಮಾನಿಗಳು ಸಿದ್ದರಾಮಯ್ಯ ಫ್ಲೆಕ್ಸ್ ಗೆ ಹೂವಿನ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೈ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದ್ದಾರೆ. ರಾಜ್ಯದ ಹಲವು ಕಡೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು ಜೈ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದ್ದಾರೆ.
ಸಿದ್ದರಾಮಯ್ಯ ಸರ್ಕಾರಿ ನಿವಾಸದ ಮುಂದೆ ಬ್ಯಾನರ್ ಹಾಕಲಾಗಿದ್ದು, ಶುಭಾಶಯಗಳನ್ನು ಕೋರಿ ಹಾಕಲಾಗಿರುವಂತ ಬ್ಯಾನರ್ ಗಳು, ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ.ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗುವ ವಿಷಯ ತಿಳಿಯುದಂತೆ ಡಿ.ಕೆ. ಶಿವಕುಮಾರ್ ಬೆಂಬಲಿಗರು, ಅಭಿಮಾನಿಗಳು, ಕಾರ್ಯಕರ್ತರು ಬೆಂಗಳೂರಿನ ಕೆಪಿಸಿಸಿ ಅಧ್ಯಕ್ಷರ ನಿವಾಸದ ಮುಂದೆ ಶುಭಾಶಯ ಕೋರಿ ಬೃಹತ್ ಗಾತ್ರದ ಬ್ಯಾನರ್‌ಗಳನ್ನು ಅಳವಡಿಸಿ ದ್ದಾರೆ.
ಸಂಜೆ ೭ಕ್ಕೆ ಮಹತ್ವದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.