
ಬೆಂಗಳೂರು, ಜು. ೩- ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ಸರ್ಕಾರ ಐಸಿಯು ಹೋಗುವ ಕಾಲ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲೇ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮತ್ತೊಂದು ಬಾಂಬ್ ಸಿಡಿಸಿರುವ ಅವರು, ಮುಖ್ಯಮಂತ್ರಿ ಕಚೇರಿಯಲ್ಲೇ ಹಣಕ್ಕೆ ಬೇಡಿಕೆ ನೀಡುತ್ತಾರೆ ಎಂದು ಕಿಡಿಕಾರಿದ್ದಾರೆ.ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಸಿಯು, ವೆಂಟಿಲೆಟರ್ ನಲ್ಲಿ ಸರ್ಕಾರ ನಡೆಯುವ ದಿನಗಳು ಬರಲಿವೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಡಲಿದೆ. ಮುಂದಿನ ೫ ವರ್ಷಗಳವರೆಗೆ ಏನು ಕೊಡಬೇಕೆಂಬ ಆತ್ಮವಿಶ್ವಾಸವೇ ರಾಜ್ಯಪಾಲರ ಭಾಷಣದಲಿಲ್ಲ ಎಂದು ವಾಗ್ದಾಳಿ ನಡೆಸಿದರು.
ಶಾಸಕರ ಶಿಫಾರಸ್ಸು ತಂದರೆ ಸಾಲದು. ೩೦ ಲಕ್ಷ ಹಣ ತನ್ನಿ ಎಂದು ಹೇಳುತ್ತಿರುವುದಾಗಿ ಆರೋಪಿಸಿದರು.
ಒಬ್ಬ ಶಾಸಕನಾಗಿ ಸರ್ಕಾರದ ಲೋಪದೋಷದ ಬಗ್ಗೆ ಚರ್ಚಿಸುತ್ತೇನೆ.ವಿಪಕ್ಷ ನಾಯಕನಾಗಿ ಸರ್ಕಾರವನ್ನು ಟೀಕೆ ಮಾಡುತ್ತಿಲ್ಲ ಎಂದು ಅವರು ತಿಳಿಸಿದರು.
ರಾಜ್ಯದ ಜನರಿಗೆ ನೀಡಿರುವ ಭರವಸೆಗಳನ್ನು ಕೊಡಲಾಗಿದೆ. ಆ ಭರವಸೆಗಳನ್ನು ಯಾವ ರೀತಿ ಈಡೇರಿಸಲು ಹೊರಟಿದ್ದೀರಿ ಎಂದು ಅವರು ಪ್ರಶ್ನಿಸಿದರು.