ಸಿದ್ದು ಹೇಳಿಕೆ ಈಶ್ವರಪ್ಪ ಆಕ್ಷೇಪ

ಶಿವಮೊಗ್ಗ,ಏ.೧೫- ಅನುದಾನ ವಿಚಾರ ಕುರಿತು ರಾಜ್ಯಪಾಲರಿಗೆ ಬರೆದ ಪತ್ರದ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ನಡುವೆ ಭಿನ್ನಾಭಿಪ್ರಾಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಸ್ಪಷ್ಟೀಕರಣ ನೀಡಿದ್ದಾರೆ.
ಆದರೆ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭಿನ್ನಮತವಿದೆ ಎಂದು ಹೇಳಿಕೆ ನೀಡುವ ಮೂಲಕ ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹುಚ್ಚ, ಬೆಪ್ಪ ಎಂಬ ಕುಡುಕರು ಬಳಸುವ ಪದವನ್ನು ಬಳಸಲು ಕೆಲವರು ಹೇಳಿದ್ದರು. ಆದರೆ ನಾನು ಅದನ್ನು ಬಳಸುವುದಿಲ್ಲ. ಸಿದ್ದರಾಮಯ್ಯನವರು ಘನತೆಗೆ ತಕ್ಕಂತೆ ಮಾತನಾಡಲಿ ಎಂದು ತಿರುಗೇಟು ನೀಡಿದರು.
ಈಶ್ವರಪ್ಪನವರು ಸಿಎಂ ವಿರುದ್ಧ ರಾಜ್ಯಪಾಲರಿಗೆ ಅನುದಾನ ಹಂಚಿಕೆ ವಿಚಾರದಲ್ಲಿ ಪತ್ರ ಬರೆದಿದ್ದಾಗ ರಾಜ್ಯರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲಿ ಈಶ್ವರಪ್ಪನವರು ಸ್ಪಷ್ಟನೆ ನೀಡಿದ್ದಾರೆ.