
ಹುಬ್ಬಳ್ಳಿ,ಸೆ5: ರಾಜಕಾರಣದಲ್ಲಿ ಯಾರೂ ಕನಸು ಕಂಡಿರೋದಿಲ್ಲ, ಅದರಂತೆ ಸಿಎಂ ಸಿದ್ದರಾಮಯ್ಯ ರಾಷ್ಟ್ರದ ರಾಜಕಾರಣಕ್ಕೆ ಹೋದರೆ ತಪ್ಪಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ ಹೇಳಿದ್ದು ಸಿದ್ದರಾಮಯ್ಯನವರು ರಾಷ್ಟ್ರದ ರಾಜಕಾರಣಕ್ಕೆ ಹೋಗಬೇಕೆಂಬ ಇಂಗೀತವನ್ನು ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಏಕೆ ರಾಷ್ಟ್ರ ರಾಜಕಾರಣಕ್ಕೆ ಹೋಗಬಾರದು? ಎಂದು ಪ್ರಶ್ನಿಸಿದರು.
ಈ ಹಿಂದೆ ಹೆಚ್.ಡಿ.ದೇವೆಗೌಡ ಅವರು ಪ್ರಧಾನಮಂತ್ರಿ ಆಗುವ ಯಾವುದೇ ಕನಸು ಕಂಡಿರಲಿಲ್ಲ, ಅದರಂತೆ ಸಿದ್ದರಾಮಯ್ಯ ಅವರೂ ಯಾವುದೇ ಕನಸು ಕಂಡಿಲ್ಲ, ಆದರೆ ನಾವು ಕನಸು ಕಾಣುತ್ತೇವೆ ಎಂದು ಅವರು ಹೇಳಿದರು.