ಸಿದ್ಧಾಂಥ ಶಿಖಾಮಣಿ ಮನುಕುಲ ಉದ್ಧರಿಸುವ ಗ್ರಂಥ

ಬೀದರ್: ಡಿ.21:ಸಿದ್ಧಾಂಥ ಶಿಖಾಮಣಿ ಮನುಕುಲ ಉದ್ಧರಿಸುವ ಶ್ರೇಷ್ಠ ಗ್ರಂಥವಾಗಿದೆ ಎಂದು ಕಾಶಿಯ 1008 ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ನುಡಿದರು.
ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ಪರಿವಾರದಿಂದ ಇಲ್ಲಿಯ ರಾಮ ಸಮರ್ಥ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಧರ್ಮ ಜಾಗೃತಿ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಜಗದ್ಗುರು ರೇಣುಕಾಚಾರ್ಯರು ಅಗಸ್ತ್ಯ ಮುನಿಗೆ ಬೋಧಿಸಿದ 1,400 ಶ್ಲೋಕಗಳನ್ನು ಗ್ರಂಥ ಒಳಗೊಂಡಿದೆ ಎಂದು ತಿಳಿಸಿದರು.
ಪರಿಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳಲು ಹಾಗೂ ಮುಕ್ತಿ ಮಾರ್ಗ ಅರಿಯಲು ಎಲ್ಲರೂ ಸಿದ್ಧಾಂಥ ಶಿಖಾಮಣಿಯನ್ನು ಓದಬೇಕು ಎಂದು ಹೇಳಿದರು.
ಶಿವಯ್ಯ ಸ್ವಾಮಿ ಅವರು ತಮ್ಮ ಮಕ್ಕಳ ಕಿರುಗುಣಿ ಹಾಗೂ ಶಾಲು ಕಾರ್ಯಕ್ರಮವನ್ನು ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಿ, ಇತರರಿಗೆ ಮಾದರಿಯಾಗಿದ್ದಾರೆ. ಸಿದ್ಧಾಂಥ ಶಿಖಾಮಣಿ ಗ್ರಂಥ ಹಾಗೂ ಬಿಲ್ವಪತ್ರಿ ಸಸಿಗಳನ್ನು ಉಚಿತವಾಗಿ ವಿತರಿಸಿರುವ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಸಪ್ತಮ ಮುದ್ರಣದ ಸಿದ್ಧಾಂಥ ಶಿಖಾಮಣಿ ಗ್ರಂಥ ಬಿಡುಗಡೆ ಮಾಡಿದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ. ಕೆ.ಸಿ. ವೀರಣ್ಣ ಮಾತನಾಡಿ, ಸಿದ್ಧಾಂಥ ಶಿಖಾಮಣಿ ಗ್ರಂಥ ಬಿಡುಗಡೆ ಮಾಡಿದ್ದು ನನ್ನ ಸೌಭಾಗ್ಯ. ಗ್ರಂಥ ದಾಸೋಹಗೈದ ಶಿವಯ್ಯ ಸ್ವಾಮಿ ಅವರ ಕಾರ್ಯ ಅನುಕರಣೀಯ ಎಂದು ಹೇಳಿದರು.
ಬಿಎ???ಎ???ಕೆ ಅಧ್ಯಕ್ಷ ಸುಭಾಷ್ ಕಲ್ಲೂರ ಸಮಾರಂಭವನ್ನು ಉದ್ಘಾಟಿಸಿದರು. ಡಾ. ರಾಜಶೇಖರ ಶಿವಾಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. 1008 ಸಿದ್ಧಾಂಥ ಶಿಖಾಮಣಿ ಗ್ರಂಥ ಹಾಗೂ 1008 ಬಿಲ್ವಪತ್ರಿ ಸಸಿಗಳನ್ನು ವಿತರಿಸಲಾಯಿತು.
ಜೈ ಭಾರತ ಮಾತಾ ರಾಷ್ಟ್ರೀಯ ಸೇವಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಹವಾ ಮಲ್ಲಿನಾಥ ಮಹಾರಾಜ, ಹಿರೇನಾಗಾಂ???ನ ಶಾಂತಲಿಂಗ ಸ್ವಾಮೀಜಿ, ಹಲಬರ್ಗಾ-ಶಿವಣಿಯ ಹಾವಗಿಲಿಂಗೇಶ್ವರ ಶಿವಾಚಾರ್ಯ, ಪಂಡಿತಾರಾಧ್ಯ ಶಿವಾಚಾರ್ಯ, ಗಂಗಾಧರ ಶಿವಾಚಾರ್ಯ, ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯ, ರಾಚೋಟೇಶ್ವರ ಶಿವಾಚಾರ್ಯ, ಶಿವಶಂಕರ ಶಿವಾಚಾರ್ಯ, ಸದಲಾಪುರ ಸ್ವಾಮೀಜಿ ನೇತೃತ್ವ ವಹಿಸಿದ್ದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಎಂ, ಸಿಂದಗಿ ತಹಶೀಲ್ದಾರ್ ಡಾ. ಪ್ರದೀಪ್ ಹಿರೇಮಠ, ಕೆಪಿಸಿಸಿ ವಕ್ತಾರ ಮಹಾಂತೇಶ ಹಟ್ಟಿ, ರಾಜ್ಯ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಉಮಾಕಾಂತ ನಾಗಮಾರಪಳ್ಳಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಎನ್. ನಂಜುಂಡೇಶ್, ಶೀಲಾ ಭಗವಂತ ಖೂಬಾ, ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಾಗರ್ ಈಶ್ವರ ಖಂಡ್ರೆ, ಕೆಆ???ಇ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ವಿಶ್ವ ಹಿಂದೂ ಪರಿಷತ್ ರಾಜ್ಯ ಕಾರ್ಯದರ್ಶಿ ರಾಮಕೃಷ್ಣ ಸಾಳೆ, ಬಿಜೆಪಿಯ ಕಲಬುರಗಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಈಶ್ವರಸಿಂಗ್ ಠಾಕೂರ್, ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ, ಕಲಬುರಗಿ-ಬೀದರ್ ಯಾದಗಿರಿ ಹಾಲು ಒಕ್ಕೂಟದ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ, ಬಿಡಿಎ ಮಾಜಿ ಅಧ್ಯಕ್ಷ ಬಾಬುವಾಲಿ, ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಸಿದ್ರಾಮಯ್ಯ ಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕುಶಾಲ್ ಯಾಬಾ, ಮಾಜಿ ಸದಸ್ಯರಾದ ರಾಜಶೇಖರ ನಾಗಮೂರ್ತಿ, ಕೇಶವರಾವ್ ತಳಘಟಕರ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಗೋಕುಲ್ ಸಿಂಗ್ ರಾಜಪೂತ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಬಿ. ಪಾಟೀಲ, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಶ್ರೀಕಾಂತ, ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಗರಾಜ ಮಠ, ಮುಖಂಡರಾದ ಬಿ.ಜಿ. ಶೆಟಕಾರ್, ರವಿ ಸ್ವಾಮಿ, ಡಾ. ಜಗನ್ನಾಥ ಹೆಬ್ಬಾಳೆ, ಸಿದ್ರಾಮಪ್ಪ ಮಾಸಿಮಾಡೆ, ಶಕುಂತಲಾ ಬೆಲ್ದಾಳೆ, ನೀತಾ ಬೆಲ್ದಾಳೆ, ತರುಣ್ ಸೂರ್ಯಕಾಂತ ನಾಗಮಾರಪಳ್ಳಿ, ಅಶೋಕಕುಮಾರ ನಾಗೂರೆ, ಶರಣಪ್ಪ ಮಿಠಾರೆ, ಓಂಪ್ರಕಾಶ ರೊಟ್ಟೆ, ವರದಯ್ಯ ಸ್ವಾಮಿ, ಶಾಂತಯ್ಯ ಸ್ವಾಮಿ, ಪ್ರಕಾಶ ಪಾಟೀಲ, ನೀಲಕಂಠಯ್ಯ ಸ್ವಾಮಿ ಕುಂಟೆಸಿರ್ಸಿ, ಡಾ. ಶರಣಯ್ಯ ಸ್ವಾಮಿ, ಶಿವಶಂಕರ ಬೆಳಮಗಿ, ಪ್ರವೀಣ ಸ್ವಾಮಿ, ನಾಗಯ್ಯ ಸ್ವಾಮಿ, ಮಹಮ್ಮದ್ ಗೌಸೊದ್ದಿನ್, ಮಹಾಲಿಂಗ ಸ್ವಾಮಿ ಚಟ್ನಳ್ಳಿ, ವಿರೂಪಾಕ್ಷ ಗಾದಗಿ, ಕಾಶೀನಾಥ ಜಕ್ಕಾ, ಅಮರ ಹಿರೇಮಠ, ಮಲ್ಲಿಕಾರ್ಜುನ ಸ್ವಾಮಿ, ದಯಾನಂದ ಸ್ವಾಮಿ, ರೇವಣಸಿದ್ದಯ್ಯ ಸ್ವಾಮಿ ಇದ್ದರು.
ಕಲಾವಿದೆ ಶಿವಾನಿ ಶಿವದಾಸ ಸ್ವಾಮಿ ಹಾಗೂ ತಂಡದವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಶಿವಯ್ಯ ಸ್ವಾಮಿ ಸ್ವಾಗತಿಸಿದರು. ನವಲಿಂಗ ಪಾಟೀಲ, ರೇಣುಕಾ ಮಳ್ಳಿ ನಿರೂಪಿಸಿದರು. ಸಿದ್ರಾಮಯ್ಯ ಹಿರೇಮಠ ವಂದಿಸಿದರು.