ಸಿನಿಮಾ ಮಂದಿಗೆ ಪ್ಯಾಕೇಜ್: ಸಿಎಂಗೆ ನಟಿ ತಾರಾ ನೇತೃತ್ವದ ನಿಯೋಗ ಮನವಿ

ಬೆಂಗಳೂರು, ಮೇ 21- ಕೊರೊನಾ‌ ಸೋಂಕಿನಿಂದ ನಲುಗಿರುವ ಕನ್ನಡ ಚಿತ್ರರಂಗಕ್ಕೆ ವಿಶೇಷ ಪ್ಯಾಕೇಜ್ ಪ್ರಕಟಿಸುವಂತೆ ಚಿತ್ರರಂಗದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದೆ.

ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಹಾಗೂ ಕಲಾವಿದೆ ತಾರಾ ಅನುರಾಧಾ ಅವರು ಇಂದು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಕನ್ನಡ ಚಿತ್ರರಂಗವರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಮನವಿ ಸಲ್ಲಿಸಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿ ಎನ್.ಎಂ.ಸುರೇಶ್ ಹಾಗೂ ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಉಪಸ್ಥಿತರಿದ್ದರು.

ಕೊರೊನಾ ಸೋಂಕು ಕಾಣಿಸಿಕೊಂಡ ಚಿತ್ರೀಕರಣ ಚಟುವಟಿಕೆಗಳ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು ಚಿತ್ರರಂಗದಲ್ಲಿ ದುಡಿಯುತ್ತಿರುವ ಕಾರ್ಮಿಕ ಕಲಾವಿದರು ತಂತ್ರಜ್ಞರ ಸಮಸ್ಯೆಗೆ ಸಿಲುಕಿದ್ದಾರೆ. ಹೀಗಾಗಿ ಅವರ ಹಿತ ಕಾಪಾಡಲು ಪ್ಯಾಕೇಜ್ ಪ್ರಕಟಿಸಿ ಎಂದು ಮನವಿ ಸಲ್ಲಿಸಿದ್ದಾರೆ.

ಈಗಾಗಲೇ ವಿವಿಧ ಸಮುದಾಯಗಳಿಗೆ ಪರಿಹಾರ ಪ್ಯಾಕೇಜ್ ಪ್ರಕಟಿಸಿರುವುದು ಶ್ಲಾಘನೀಯ ಅದೇ ರೀತಿ ಕನ್ನಡ ಚಿತ್ರರಂಗದ ಮಂದಿಗೆ ಪರಿಹಾರ ಪ್ಯಾಕೇಜ್ ಪ್ರಕಟಿಸಿ, ಅವರ ನೆರವಿಗೆ ಧಾವಿಸಿ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.