ಸಿಬಿಎಸ್‌ಇ ಪರೀಕ್ಷೆ ರದ್ದು ವಿಚಾರಣೆಗೆ ಸುಪ್ರೀಂ ಸಮ್ಮತಿ


ನವದೆಹಲಿ, ಮೇ.೨೮- ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ- ಸಿಬಿಎಸ್ ಇ ೧೨ ತರಗತಿ ಪರೀಕ್ಷೆ ರದ್ದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
ಸುಪ್ರೀಂ ಕೋರ್ಟ್ ನ ರಜಾ ಕಾಲದ ನ್ಯಾಯಪೀಠದ ನೇತೃತ್ವ ವಹಿಸಿರುವ ನ್ಯಾಯಮೂರ್ತಿ ಎ.ಎಂ ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರಿದ್ದ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಲು ಒಪ್ಪಿಗೆ ನೀಡಿದೆ.
೧೨ನೇ ತರಗತಿ ಸಿಬಿಎಸ್ಸಿ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿರುವುದನ್ನು ಪ್ರಶ್ನಿಸಿ, ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸೂಕ್ತವಲ್ಲ ಹೀಗಾಗಿ ಪರೀಕ್ಷೆಯನ್ನು ರದ್ದು ಮಾಡುವಂತೆ ಕೋರಿ ಸುಪ್ರೀಂಕೋರ್ಟ್ ವಕೀಲರಾದ ಮಮತಾ ಶರ್ಮಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ತಿಳಿಸಲಾಗಿದೆ
ಇಂದು ಅರ್ಜಿ ಕೈಗೆತ್ತಿಕೊಂಡ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ಸೋಮವಾರ ಬೆಳಗ್ಗೆ ೧೧ ಗಂಟೆಗೆ ಮುಂದೂಡಿದೆ. ಅಲ್ಲದೆ ಈ ಸಂಬಂಧ ಶೀಘ್ರ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಸಿಬಿಎಸ್ಸಿ ಮತ್ತು ಐಸಿಎಸ್ಸಿ ಗೆ ಸೂಚಿಸಿದೆ.
ಸಿಬಿಎಸ್‌ಇ ಮತ್ತು ಐಸಿಎಸ್ ಸಿ ೧೨ನೇ ತರಗತಿ ಪರೀಕ್ಷೆ ನಡೆಸದೆ ಅಬ್ಜೆಕ್ಟಿವ್ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಬೇಕು ಎಂದು ಅವರು ಸುಪ್ರೀಂಕೋರ್ಟ್ ಮನೆ ಮಾಡಿದ್ದಾರೆ
೭ ಸಾವಿರ ಪೋಷಕರು ಮೊರೆ:
ಈ ನಡುವೆ ದೇಶಾದ್ಯಂತ ೭ ಸಾವಿರಕ್ಕೂ ಅಧಿಕ ಪೋಷಕರು ಸಿಬಿಎಸ್ಸಿ ಎರಡನೇ ತರಗತಿ ಪರೀಕ್ಷೆ ನಡೆಸದಂತೆ ಸುಪ್ರೀಂಕೋರ್ಟ್ ಗೆ ಮೊರೆಹೋಗಿದ್ದಾರೆ.
ಜೂನ್ ೧ರಂದು ಪರೀಕ್ಷಾ ದಿನಾಂಕವನ್ನು ಪ್ರಕಟಿಸಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಪರೀಕ್ಷೆ ನಡೆಸದ ವಿದ್ಯಾರ್ಥಿಗಳನ್ನು ಪಾಸು ಮಾಡುವಂತೆ ಅರ್ಜಿ ಸಲ್ಲಿಸಲಾಗಿದೆ